Ad Widget .

ಎಪ್ರಿಲ್ 20 ರಂದು ಕರುನಾಡಿಗೆ ನಮೋ| ಚಿಕ್ಕಬಳ್ಳಾಪುರ, ಬೆಂಗಳೂರಿನಲ್ಲಿ ಬೃಹತ್ ಸಮಾವೇಶ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಚಾರ, ರ್ಯಾಲಿಗಳು ನಡೆಯುತ್ತಿದ್ದು, ಮೊನ್ನೆಯಷ್ಟೆ ಕರುನಾಡಿಗೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದರು. ಮೈಸೂರು ಮಂಗಳೂರಿನಲ್ಲಿ ಸಮಾವೇಶ ಕೈಗೊಂಡಿದರು. ಇದೀಗ ಮತ್ತೊಮ್ಮೆ ಕರುನಾಡಿಗೆ ನಮೋ ಎಂಟ್ರಿ ಕೊಡಲಿದ್ದಾರೆ. ಇದೇ ಶನಿವಾರ ಎಪ್ರಿಲ್ 20 ರಂದು ನಮೋ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳಲ್ಲಿ ಮೋಡಿ ಮಾಡಲಿದ್ದಾರೆ.

Ad Widget . Ad Widget .

ಏಪ್ರಿಲ್‌ 20ರಂದು ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ನಂತರ ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಪ್ರಚಾರ ರ‍್ಯಾಲಿಯನ್ನು ಆಯೋಜನೆ ಮಾಡಲಾಗಿದೆ. ಇಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಕೇಂದ್ರ ಲೋಕಸಭಾ ಕ್ಷೇತ್ರಗಳು ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನೊಳಗೊಂಡಂತೆ ನರೇಂದ್ರ ಮೋದಿ ಮಾತನಾಡಲಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *