ಚಿಕ್ಕಮಗಳೂರು: ಚುನಾವಣೆ ಹಿನ್ನಲೆಯಲ್ಲಿ ಹೋಮ್ ಸ್ಟೇ, ರೆಸಾರ್ಟ್ ಬುಕ್ಕಿಂಗ್ ರದ್ದುಗೊಳಿಸಿ‌ ಡಿಸಿ ಆದೇಶ

ಸಮಗ್ರ ನ್ಯೂಸ್: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನವು ಜಿಲ್ಲೆಯಲ್ಲಿ ಹಾಗೂ ರಾಜ್ಯದ ಬಹುತೇಕ ಜಿಲ್ಲೆಯಲ್ಲಿ ಏಪ್ರಿಲ್ 26 ರಂದು ಜರುಗಲಿದೆ. ಈ ಹಿನ್ನೆಲೆಯಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ಹೊರಗುಳಿಯಬಾರದು. ಪ್ರತಿಯೊಂದು ಮತವು ಅತ್ಯಮೂಲ್ಯ ಎಂಬ ತಾತ್ವಿಕ ನೆಲೆಗಟ್ಟಿನಡಿ ಏಪ್ರಿಲ್ 26 ರಂದು ಶೇ 100ರಷ್ಟು ಮತದಾನ ಆಗುವಂತೆ ನೋಡಿಕೊಳ್ಳುವುದು ಜಿಲ್ಲಾ ಚುನಾವಣಾಧಿಕಾರಿಗಳ ಕರ್ತವ್ಯವಾಗಿರುತ್ತದೆ,

Ad Widget ... ..

ರಾಜ್ಯದಲ್ಲಿ ಶೇ 100 ರಷ್ಟು ಮತದಾನ ಮಾಡಿಸುವ ನಿಟ್ಟಿನಲ್ಲಿ ಏಪ್ರಿಲ್ 25 ಹಾಗೂ ಏಪ್ರಿಲ್ 26 ರಂದು ಬೇರೆ ಬೇರೆ ಜಿಲ್ಲೆಯ ಪ್ರವಾಸಿಗರನ್ನು ಹೋಂ ಸ್ಟೇ / ರೆಸಾರ್ಟ್‌ಗಳಲ್ಲಿ ಬುಕ್ಕಿಂಗ್ ಸ್ವೀಕರಿಸದೆ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆಯನ್ನು ಯಶ್ವಸಿಗೊಳಿಸಲು ಜಿಲ್ಲಾಡಳಿತದೊಂದಿಗೆ ಹೋಂ ಸ್ಟೇ ಹಾಗೂ ರೆಸಾರ್ಟ್‌ಗಳ ಮಾಲೀಕರು ಸಹಕರಿಸುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ಸೂಚನೆ ನೀಡಿದ್ದಾರೆ.

Ad Widget

ಮತದಾನ ದಿನದಂದು ಸಾರ್ವಜನಿಕ ಶಾಂತಿ ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಏಪ್ರಿಲ್ 24ರ ಸಂಜೆ 5 ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿ 12 ಗಂಟೆಯವರೆಗೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಆದೇಶ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *