Ad Widget .

ಪುತ್ತೂರು ಜಾತ್ರೆ ಹಿನ್ನಲೆ| ಮದ್ಯ ಮಾರಾಟ ನಿಷೇಧಿಸಿದ‌ ಡಿಸಿ

ಸಮಗ್ರ ನ್ಯೂಸ್: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 10 ರಿಂದ ಏಪ್ರಿಲ್ 20ರವರೆಗೆ ವರ್ಷಾವಧಿ ಜಾತ್ರೆಯೂ ನಡೆಯುತ್ತಿದ್ದು, ಜಾತ್ರೋತ್ಸವದ ಸಮಯದಲ್ಲಿ ಸಾವಿರಾರು ಜನರು ಸೇರುವ ನಿರೀಕ್ಷೆ ಇರುತ್ತದೆ.

Ad Widget . Ad Widget .

ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್‍ಗಳನ್ನು ಏಪ್ರಿಲ್ 17ರಂದು ಬೆಳಿಗ್ಗೆ 6 ಗಂಟೆಯಿಂದ ಏಪ್ರಿಲ್ 18ರ ಮಧ್ಯರಾತ್ರಿ 12 ಗಂಟೆಯವರೆಗೆ ಮುಚ್ಚುವಂತೆ ಏಪ್ರಿಲ್ 17ರಂದು ಬೆಳಿಗ್ಗೆ 6 ಗಂಟೆಯಿಂದ ಏಪ್ರಿಲ್ 18ರ ಬೆಳಿಗ್ಗೆ ಆರು ಗಂಟೆವರೆಗೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *