Ad Widget .

ಅಹಮದಾಬಾದ್ ನಲ್ಲಿ ಭೀಕರ ಅಪಘಾತ| 10 ಮಂದಿ ದುರ್ಮರಣ

ಸಮಗ್ರ ನ್ಯೂಸ್: ಅಹಮದಾಬಾದ್ ವಡೋದರಾ ಎಕ್ಸ್‌ಪ್ರೆಸ್‌ವೇಯ ನಾಡಿಯಾಡ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಕೆಟ್ಟು ನಿಂತಿದ ಟ್ಯಾಂಕರ್‌ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ.

Ad Widget . Ad Widget .

ಈ ಕಾರು ವಡೋದರಾದಿಂದ ಅಹಮದಾಬಾದ್‌ಗೆ ಹೋಗುತ್ತಿತ್ತು. ಅಪಘಾತದ ನಂತರ, ವಡೋದರಾ-ಅಹಮದಾಬಾದ್ ಎಕ್ಸ್‌ಪ್ರೆಸ್ ಹೆದ್ದಾರಿ ಜಾಮ್ ಆಗಿದ್ದು, ಅಪಘಾತದಿಂದ ಕಾರಿನಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಿಕಿತ್ಸೆ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ.

Ad Widget . Ad Widget .

ವಿಷಯ ತಿಳಿಯಿತ್ತಿದ್ದಂತೆಯೇ ಪೊಲೀಸರು ಹಾಗೂ ಖೇಡಾ ಜಿಲ್ಲೆಯ ಎಸ್ಪಿ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

Leave a Comment

Your email address will not be published. Required fields are marked *