Ad Widget .

ಮಂಗಳೂರು: ಯುವ ದಂತವೈದ್ಯೆ ಹಠಾತ್ ಸಾವು

ಸಮಗ್ರ ವಾರ್ತೆ: ಯುವ ದಂತ ವೈದ್ಯೆಯೊಬ್ಬರು ಹಠಾತ್ತಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಪಾಂಡೇಶ್ವರ ಪಿಜಿಯಲ್ಲಿ ನಡೆದಿದೆ. ಮೃತರನ್ನು ಡಾ. ಸ್ವಾತಿ ಶೆಟ್ಟಿ (24) ಎಂದು ಗುರುತಿಸಲಾಗಿದೆ.

Ad Widget . Ad Widget .

ಎ.ಜೆ. ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ ಪದವಿ ಪೂರೈಸಿದ್ದ ಸ್ವಾತಿ ಮಂಗಳವಾರದಿಂದ ನಗರದ ಪಾಂಡೇಶ್ವರದ ಕ್ಲಿನಿಕ್ ಒಂದರಲ್ಲಿ ವೈದ್ಯಕೀಯ ವೃತ್ತಿ ಆರಂಭಿಸಲಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ತನಕ ಆಳ್ವರಬೆಟ್ಟು ಮನೆಯಲ್ಲಿ ತಂಗಿದ್ದ ಸ್ವಾತಿ ಸೋಮವಾರ ಸಂಜೆ ಮನೆಯಿಂದ ಪಾಂಡೇಶ್ವರದ ಪಿಜಿಗೆ ಬಂದು ತಂಗಿದ್ದರು. ರಾತ್ರಿ ತಾಯಿ ತಂದೆ ಜತೆಗೆ ಮೊಬೈಲ್ ನಲ್ಲಿ ಮಾತನಾಡಿ ಬಳಿಕ ವಿಪರೀತ ತಲೆನೋವು ಎಂದು ಹೇಳಿ ನಾಳೆ ಮಾತನಾಡುತ್ತೇನೆ ಎಂದು ಹೇಳಿ ಫೋನ್ ಕರೆ ಕಟ್ ಮಾಡಿದ್ದರು. ಪಕ್ಕದ ಸಹಪಾಠಿ ಕೂಡ ತಲೆನೋವು ಇರುವುದರಿಂದ ತೊಂದರೆ ಕೊಡೋದು ಬೇಡ ಎಂದು ಎಚ್ಚರಿಸಲಿಲ್ಲ ಎನ್ನಲಾಗಿದೆ.

Ad Widget . Ad Widget .

ಬೆಳಗ್ಗೆ ದೇಹ ತಣ್ಣಗಾಗಿದ್ದನ್ನು ಕಂಡು ಪಿಜಿ ಸೂಪರ್ ವೈಸರ್ ಮಾಹಿತಿ ನೀಡಿ ತಕ್ಷಣ ಆಂಬ್ಯುಲೆನ್ಸ್ ತರಿಸಿ ವೆನ್ ಲಾಕ್ ಗೆ ದಾಖಲಿಸುವಷ್ಟರಲ್ಲಿ ಸ್ವಾತಿಯ ಪ್ರಾಣಪಕ್ಷಿ ಹಾರಿಹೋಗಿತ್ತು. ಅವಿವಾಹಿತೆಯಾಗಿರುವ ಸ್ವಾತಿ ಶೆಟ್ಟಿ ಅವರಿಗೆ ಪೋಷಕರು ಈ ವರ್ಷಾಂತ್ಯದೊಳಗೆ ಮದುವೆ ಮಾಡುವ ತಯಾರಿ ನಡೆಸಿದ್ದರು. ಅಪರೂಪಕ್ಕೊಮ್ಮೆ ತಲೆನೋವು ಬಿಟ್ರೆ ಬೇರೆ ಯಾವುದೇ ತೊಂದರೆ ಇರಲಿಲ್ಲ ಎನ್ನಲಾಗಿದೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Leave a Comment

Your email address will not be published. Required fields are marked *