ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ ಮುಸ್ಲಿಂ ಯುವಕರಿಂದ ಹಿಂದೂ ಯುವಕರ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಇಂದು ರಾಮನವಮಿ ಸಂಭ್ರಮ, ನಾಡಿನೆಲ್ಲೆಡೆ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ರಾಮನವಮಿ ಮುಗಿಸಿಕೊಂಡು ಕಾರಿನಲ್ಲಿ ಹೋಗುತ್ತಿದ್ದ ಯುವಕರನ್ನು ಅಡ್ಡಗಟ್ಟಿ ಅನ್ಯಕೋಮಿನ ಯುವಕರು ಪುಂಡಾಟ ಮೆರೆದಿದ್ದಾರೆ. ಈ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ ಬೆಟ್ಟಳ್ಳಿ ಮಸೀದಿ ಬಳಿ ನಡೆದಿದೆ.

Ad Widget ... ..

ಇಬ್ಬರು ಮುಸ್ಲಿಂ ಯುವಕರು ‘ಕಾರಿನ ಬಳಿ ಬಂದು ಜೈ ಶ್ರೀರಾಮ್ ಎಂದು ಹೇಳಬೇಕಾ, ಜೈ ಶ್ರೀ ರಾಮ್ ಇಲ್ಲ. ಓನ್ಲೀ ಅಲ್ಲಾ ಹು ಅಕ್ಬರ್ ಎಂದು ಹೇಳಿ, ಇದಲ್ಲದೆ ಕಾರಿನಲ್ಲಿ ಇದ್ದವರಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ. ಇದೇ ವೇಳೆ ಕಾರಿನಲ್ಲಿದ್ದ ಯುವಕರು, ನಾವು ನಿಮ್ಮ ಹಬ್ಬದಲ್ಲಿ ಹೀಗೆ ಮಾಡ್ತಿವಾ ಎಂದು ಪ್ರಶ್ನೆ ಮಾಡಿದ್ದಾರೆ. ಆಗ ಅಲ್ಲೆ ಇದ್ದ ಮತ್ತೆ ಇಬ್ಬರು ಸೇರಿಕೊಂಡು ಮೂವರು ಹಿಂದು ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಯುವಕರ ಹುಡುಕಾಟದಲ್ಲಿದ್ದಾರೆ.

Ad Widget

Leave a Comment

Your email address will not be published. Required fields are marked *