ರಾಮನವಮಿಯಂದು ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 45 ಜನ ಅಸ್ವಸ್ಥ

ಸಮಗ್ರ ನ್ಯೂಸ್: ನಿನ್ನೆ ರಾಮನವಮಿ ಸಂಭ್ರಮ. ಇದೇ ಸಂದರ್ಭದಲ್ಲಿ ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 45 ಜನರು ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

Ad Widget ... ..

ನಿನ್ನೆ ತುಮಕೂರಿನ ಸುಬ್ರಹ್ಮಣ್ಯ ದೇಗುಲದಲ್ಲಿ ಮಜ್ಜಿಗೆ, ಪಾನಕವನ್ನ ಗ್ರಾಮಸ್ಥರು ಸೇವಿಸಿದ್ದರು. ಬಳಿಕ ಮಧ್ಯರಾತ್ರಿಯಿಂದ ವಾಂತಿ-ಭೇದಿ ಶುರುವಾಗಿದೆ. ಇವರೆಲ್ಲ ಬೆಳಗ್ಗೆ ಎಡೆಯೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು. ಆದರೆ, ಆರೋಗ್ಯ ಸುಧಾರಿಸದ ಹಿನ್ನೆಲೆ ಕುಣಿಗಲ್ ತಾಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

Ad Widget

Leave a Comment

Your email address will not be published. Required fields are marked *