Ad Widget .

ಶಿವಮೊಗ್ಗ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಎಂದ ಕುಮಾರಸ್ವಾಮಿ

ಸಮಗ್ರ ನ್ಯೂಸ್‌ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಧಿಕಾರಕ್ಕೆ ಬಂದಾಗಲೆಲ್ಲ ಬರ ಪರಿಸ್ಥಿತಿ ತಲೆದೋರಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Ad Widget . Ad Widget .

ಅವರು ಸಂಸದ ಬಿ.ವೈ.ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆಯ ನಂತರ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ನಾನು ಸರ್ಕಾರ ಮಾಡಿದ್ದೆ. ಬಿ.ಎಸ್.ಯಡಿಯೂರಪ್ಪ , ಬಸವರಾಜ್ ಬೊಮ್ಮಾಯಿ ಸರ್ಕಾರ ಮಾಡಿದ್ದಾರೆ. ಆಗೆಲ್ಲಾ ಬರ ಬಂದಿರಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಬಂದಿದೆ ಎಂದರು.

Ad Widget . Ad Widget .

ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಕ್ಷೇತ್ರಗಳ ಅಭಿವೃದ್ಧಿಗೆ ಸಂಸದ ಬಿ.ವೈ. ರಾಘವೇಂದ್ರ ಶ್ರಮಿಸಿದ್ದಾರೆ. 2006ರಲ್ಲಿ ಬಿ.ಎಸ್.ಯಡಿಯೂರಪ್ಪ ಜೊತೆ ಒಟ್ಟಾಗಿ ಕೆಲಸ ಮಾಡಿದ್ದ ವೇಳೆ ಮಹಿಳೆಯರಿಗೆ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತರಲಾಗಿತ್ತು.

ಮೈತ್ರಿ ಸರ್ಕಾರದಲ್ಲಿ ಸಾರಾಯಿ ನಿಷೇಧ ಮಾಡಲಾಗಿತ್ತು. ಕಾಂಗ್ರೆಸ್ ಸುಳ್ಳು ಭರವಸೆ ನೀಡಿ ಇವತ್ತು ಅಧಿಕಾರಕ್ಕೆ ಬಂದಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ಮಹಿಳೆಯರಿಗೆ ₹1ಲಕ್ಷ ಹಣ ನೀಡುವುದಾಗಿ ಹೇಳಿದೆ. 75 ಕೋಟಿ ತಾಯಂದಿರು ಈ ದೇಶದಲ್ಲಿದ್ದಾರೆ. ಅವರಿಗೆಲ್ಲ ಹಣ ನೀಡಲು ₹75 ಲಕ್ಷ ಕೋಟಿ ಬೇಕು. ಈಗಿನ ಬಜೆಟ್ ₹47 ಲಕ್ಷ‌ ಕೋಟಿ ಮಾತ್ರ. ಉಳಿದ ಹಣ ಎಲ್ಲಿಂದ ತರುತ್ತಾರೆ ಎಂದು ವ್ಯಂಗ್ಯವಾಡಿದರು.

Leave a Comment

Your email address will not be published. Required fields are marked *