Ad Widget .

ಹುಬ್ಬಳ್ಳಿ: ‘ನನ್ನ ಮಗನಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿʼ ಎಂದ ಫಯಾಜ್ ತಂದೆ‌

ಸಮಗ್ರ ನ್ಯೂಸ್‌ : ನನ್ನ ಮಗನಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿ, ಮುಂದೆ ಇಂಥ ಕ್ರೂರ ಕೆಲಸಕ್ಕೆ ಯಾರೂ ಕೈ ಹಾಕಬಾರದು ಅಂಥ ಶಿಕ್ಷೆ ನನ್ನ ಮಗನಿಗೆ ಆಗಲಿ ಎಂದು ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ತಂದೆ‌ ಬಾಬಾ ಸಾಹೇಬ್‌ ಸುಬಾನಿ ಕಣ್ಣೀರು ಹಾಕಿದ್ದಾರೆ.

Ad Widget . Ad Widget .

ಕಾನೂನು ಯಾವ ಶಿಕ್ಷೆ ಕೊಟ್ಟರೂ ಅದನ್ನು ನಾನು ಸ್ವಾಗತಿಸುತ್ತೇನೆ. ದಯವಿಟ್ಟು ನೇಹಾ ಕುಟುಂಬದವರು, ರಾಜ್ಯದ ಜನ ಹಾಗೂ ಮುನವಳ್ಳಿ ಜನತೆ ನನ್ನನ್ನು ಕ್ಷಮಿಸಬೇಕು ಎಂದು ಕೈ ಮುಗಿದು ಬೇಡಿಕೊಂಡರು.

Ad Widget . Ad Widget .

ಹೆಣ್ಣು ಮಕ್ಕಳು ಎಂದರೆ ಪೂಜಿಸುತ್ತೇವೆ. ಹೆಣ್ಣು ಮಕ್ಕಳು ಎಂದರೆ ದೇವರೆಂದು ಭಾವಿಸುವ ದೇಶ ನಮ್ಮದು, ಅನ್ಯಾಯ ಆದಲ್ಲಿ ಪ್ರತಿಭಟನೆ ಮಾಡುತ್ತಾರೆ. ಅವರ ಹೋರಾಟಕ್ಕೆ ಜಯವಾಗಲಿ. ಕರ್ನಾಟಕ ಜನತೆಯಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಈ ಘಟನೆಯಿಂದ ಮುನವಳ್ಳಿ ಊರಿಗೆ ಕಪ್ಪು ಚುಕ್ಕೆಯಾಗಿದೆ. ರಾಜ್ಯದ ಜನತೆ ಹಾಗೂ ಮುನವಳ್ಳಿ ಯುವಕರು ಶಾಂತಿ ಕಾಪಾಡುವಂತೆ ಕಣ್ಣೀರಾಕುತ್ತಲೇ ಭವಾನಿ ಮನವಿ ಮಾಡಿದ್ದಾರೆ.

Leave a Comment

Your email address will not be published. Required fields are marked *