Ad Widget .

ಬಿಬಿಎಂಪಿಯಲ್ಲಿ 11 ಸಾವಿರಕ್ಕೂ ಅಧಿಕ ಜಾಬ್ ಆಫರ್! ಯಾರಿಗುಂಟು ಯಾರಿಗಿಲ್ಲ? ಅಪ್ಲೈ ಮಾಡಿ ಬೇಗ

ಸಮಗ್ರ ಉದ್ಯೋಗ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 11,307 ಪೌರಕಾರ್ಮಿಕ- ಗ್ರೂಪ್​ ಡಿ(Group D) ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಮೇ 15, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್/ಪೋಸ್ಟ್​​ ​ ಮೂಲಕ ಅರ್ಜಿ ಹಾಕಿ.

Ad Widget . Ad Widget .

ಹುದ್ದೆಯ ಮಾಹಿತಿ:
ಸ್ಥಳೀಯ ವೃಂದದ ಹುದ್ದೆಗಳು(KK) ಕಲ್ಯಾಣ ಕರ್ನಾಟಕ- 905 ಹುದ್ದೆಗಳು
ಉಳಿಕೆ ಮೂಲ ವೃಂದದ ಹುದ್ದೆಗಳು (RPC)-10,402 ಹುದ್ದೆಗಳು

Ad Widget . Ad Widget .

ವಿದ್ಯಾರ್ಹತೆ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೇರ ಪಾವತಿ/ ಕಲ್ಯಾಣ/ ದಿನಗೂಲಿ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಯಾವುದೇ ಶೈಕ್ಷಣಿಕ ಅರ್ಹತೆ ಇರಬೇಕು ಎಂದು ಬಿಬಿಎಂಪಿ ತಿಳಿಸಿಲ್ಲ.

ವಯೋಮಿತಿ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 55 ವರ್ಷ ಮೀರಿರಬಾರದು.

ವೇತನ:
ಗ್ರೂಪ್​ ಡಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 17,000-28,950 ರೂ. ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:
ಬೆಂಗಳೂರು

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ
ಮಹಾನಗರ ಪಾಲಿಕೆ ಕಚೇರಿಗಳು
ನರಸಿಂಹರಾಜ ಚೌಕ್
ಬೆಂಗಳೂರು-560002

Leave a Comment

Your email address will not be published. Required fields are marked *