Ad Widget .

ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಬೆಳ್ಳಂಬೆಳಗೆ ಐಟಿ ಶಾಕ್

ಸಮಗ್ರ ನ್ಯೂಸ್: ಚುನಾವಣೆ ಹೊಸ್ತಿಲಲ್ಲಿರುವಾಗಲೆ ಇಂದು ಬೆಳ್ಳಂಬೆಳಗೆ ಅಧಿಕಾರಿಗಳಿಗೆ ಐಟಿ ಶಾಕ್ ಕೊಟ್ಟಿದೆ. ಬೆಂಗಳೂರಿನ ಹತ್ತಕ್ಕೂ ಹೆಚ್ಚು ಕಡೆ ಬೆಳಗ್ಗೆ ಐಟಿ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಚುನಾವಣೆಗೆ ಹಣ ಸಾಗಾಟ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಿರುವ ಸಾಧ್ಯತೆ ಇದೆ.

Ad Widget . Ad Widget .

ಇನ್ನೂ ಕಾಂಗ್ರೆಸ್ ಪಕ್ಷದ ಜತೆ ಗರುತಿಸಿಕೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳು ನೆಲಮಂಗಲದಲ್ಲಿ ಕೆಲವು ದಿನಗಳ ಹಿಂದೆ ದಾಳಿ ಮಾಡಿದ್ದರು. ಡಿ.ಕೆ ಶಿವಕುಮಾರ್ ಹಾಗೂ ಡಿ.ಕೆ ಸುರೇಶ್ ಆಪ್ತ ಕನಕಪುರ ಕೆಂಪರಾಜು ಮನೆ ಮೇಲೆ, ಮತ್ತೊಬ್ಬ ಆಪ್ತನ ವಾಜರಹಳ್ಳಿ ಮನೆ ಮೇಲೆ ಐಟಿ ದಾಳಿ ನಡೆದಿತ್ತು.

Ad Widget . Ad Widget .

ಮಂಗಳವಾರ ಐಟಿ ದಾಳಿಯಿಂದ ಧಾರವಾಡದ ದಾಸನಕೊಪ್ಪ ಕ್ರಾಸ್‌ ಬಳಿಯ ಅರ್ನಾ ರೆಸಿಡೆನ್ಸಿಯ ಮೂರನೇ ಮಹಡಿಯಲ್ಲಿರುವ ಬಸವರಾಜ್‌ ದತ್ತನವರ್‌ ಎನ್ನುವರ ಪ್ಲಾಟ್‌ ನಂ 303ರ ನಿವಾಸದ ಮೇಲೆ ಐಟಿ ದಾಳಿ ನಡರಸಿ ಬರೋಬ್ಬರಿ 18 ಕೋಟಿ ರೂ. ನಗದು ವಶಕ್ಕೆ ಪಡೆದುಕೊಂಡಿದ್ದರು.

Leave a Comment

Your email address will not be published. Required fields are marked *