ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ಮೊದಲ ದಿನವೇ ಸಮಸ್ಯೆಗಳು ಎದುರಾಗಿದೆ. ಪಶ್ಚಿಮ ಬಂಗಾಳದಲ್ಲಿಅಹಿತಕರ ಘಟನೆಯೊಂದು ನಡೆದಿದ್ದು, ಕೂಚ್‍ಬೆಹಾರ್‍ನ ಚಂದ್ಮರಿ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಿ ಮತದಾನ ಮಾಡಲು ಅಡ್ಡಿ ಪಡಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪಶ್ಚಿಮ ಬಂಗಾಳದ ಕೂಚ್ ಬೆಹಾರ್, ಅಲಿಪುರ್ದವಾರ್ಸ್ ಮತ್ತು ಜನ್ಮಗುರಿ ಲೋಕಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆಯಿಂದ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಆದರೆ ಇದೀಗ ಕೂಚ್‍ಬೆಹಾರ್ ಕ್ಷೇತ್ರದ ಈ ಕಲ್ಲು ತೂರಾಟ ನಡೆಸಲಾಗಿದೆ ಎಂದು ವರದಿಯಾಗಿದೆ.
ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಕೂಚ್ ಬೆಹಾರ್, ಅಲಿಪುರ್ದವಾರ್ಸ್ ಮತ್ತು ಜಗುರಿ ಕ್ಷೇತ್ರದಲ್ಲಿ ಕೇಂದ್ರ ಪಡೆಗಳ ಜೊತೆಗೆ ಒಟ್ಟು 2,454 ರಾಜ್ಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.