Ad Widget .

ತಿರುವನಂತಪುರಂ : ಇರಾನ್‌ನಿಂದ ಬಿಡುಗಡೆ -ಭಾರತ ಸರ್ಕಾರಕ್ಕೆ ಧನ್ಯವಾದ: ಟೆಸ್ಸಾ ಜೋಸೆಫ್

ಸಮಗ್ರ ನ್ಯೂಸ್‌ : ಇರಾನ್‌ ವಶಪಡಿಸಿಕೊಂಡಿದ್ದ ಹಡಗಿನಿಂದ ನನ್ನ ಬಿಡುಗಡೆಗೆ ಸಹಕರಿಸಿದ ಭಾರತ ಸರ್ಕಾರಕ್ಕೆ ಧನ್ಯವಾದಗಳು ಎಂದು ಸ್ವದೇಶಕ್ಕೆ ಮರಳಿದ ಟೆಸ್ಸಾ ಜೋಸೆಫ್ ಹೇಳಿದ್ದಾರೆ.

Ad Widget . Ad Widget .

ಮಾಧ್ಯಮಗಳ ಜೊತೆ ಮಾತನಾಡಿ ಈ ವೇಳೆ ಹಡಗಿನಲ್ಲಿದ್ದ 25 ಸಿಬ್ಬಂದಿಗಳ ಜೊತೆ ಇರಾನಿನ ಯಾರೂ ಕೆಟ್ಟದಾಗಿ ನಡೆಸಿಕೊಳ್ಳಲಿಲ್ಲ. ತಮ್ಮ ಕುಟುಂಬದ ಜೊತೆ ಸಂವಹನ ನಡೆಸಲು ವ್ಯವಸ್ಥೆ ಮಾಡಿಕೊಟ್ಟಿದ್ದರು ಎಂದು ತಿಳಿಸಿದರು.

Ad Widget . Ad Widget .

ಹಡಗಿನಲ್ಲಿ ನಾನೊಬ್ಬಳೇ ಮಹಿಳೆ ಸಿಬ್ಬಂದಿಯಾಗಿದ್ದರಿಂದ ನನ್ನನ್ನು ಬೇಗ ಬಿಡುಗಡೆ ಮಾಡಿರಬಹುದು. ಉಳಿದ ಭಾರತದ 17 ಸಿಬ್ಬಂದಿ ಶೀಘ್ರವೇ ಬಿಡುಗಡೆಯಾಗಬಹುದು. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ನೇರ ಮಧ್ಯಸ್ಥಿಕೆಯಿಂದಾಗಿ ನಾನು ಬೇಗ ಬಿಡುಗಡೆಯಾಗಿದ್ದೇನೆ. ಅವರಷ್ಟೇ ಅಲ್ಲದೇ ನನ್ನ ಬಿಡುಗಡೆಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದರು.

ಒಂಬತ್ತು ತಿಂಗಳ ಹಿಂದೆಯಷ್ಟೇ ಹಡಗಿನಲ್ಲಿ ಸಿಬ್ಬಂದಿಯಾಗಿ ನಾನು ಸೇರಿದ್ದೆ. ನಾನು ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಆಸೆಯಿಂದ ಈ ಉದ್ಯೋಗಕ್ಕೆ ಸೇರಿದೆ. ಇದು ನನ್ನ ಮೊದಲ ಹಡಗು. ಈ ಘಟನೆಯಿಂದ ವಿಚಲಿತಳಾಗಿ ನಾನು ಉದ್ಯೋಗ ತೊರೆಯುವುದಿಲ್ಲ ಎಂದು ಅವರು ತಿಳಿಸಿದರು.

ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಗಳನ್ನು ಬರಮಾಡಿಕೊಂಡ ತಂದೆ ಬಿಜು ಅಬ್ರಹಾಂ ಮಾತನಾಡಿ, ಭಾರತ ಸರ್ಕಾರ ಮತ್ತು ಇತರ ಏಜೆನ್ಸಿಗಳ ಕಠಿಣ ಪರಿಶ್ರಮದಿಂದಾಗಿ ತಾನು ಇಷ್ಟು ಬೇಗ ಮನೆಗೆ ಮರಳಲು ಸಾಧ್ಯವಾಯಿತು ಎಂದು ಅವರು ಹೇಳಿದರು.

ಜೋಸೆಫ್ ಭಾರತಕ್ಕೆ ಬಂದಿಳಿದ ನಂತರ ವಿದೇಶಾಂಗ ಸಚಿವ ಎಸ್ ಜೈಶಂಕರ್‌ ಅವರು, ಇರಾನ್‌ನಲ್ಲಿರುವ ಭಾರತೀಯ ಮಿಷನ್‌ನ ಅದ್ಭುತ ಕೆಲಸ. ಟೆಸ್ಸಾ ಜೋಸೆಫ್ ಮನೆಗೆ ತಲುಪಿದ್ದಕ್ಕೆ ಸಂತೋಷವಾಗಿದೆ. ದೇಶ ಅಥವಾ ವಿದೇಶದಲ್ಲಿ ಇರಲಿ ಮೋದಿ ಕೀ ಗ್ಯಾರಂಟಿ ಯಾವಾಗಲೂ ಕೆಲಸ ಮಾಡುತ್ತದೆ ಎಂದು ಪೋಸ್ಟ್‌ ಮಾಡಿದ್ದರು.

ಏಪ್ರಿಲ್‌ 14 ರಂದು ಜೈಶಂಕರ್‌ ಇರಾನ್‌ ವಿದೇಶಾಂಗ ಸಚಿವ ಅಮೀರ್-ಅಬ್ದುಲ್ಲಾಹಿಯಾನ್ ಜೊತೆ ಮಾತುಕತೆ ನಡೆಸಿದ್ದರು. ಈ ಮಾತುಕತೆಯ ನಂತರ ಇರಾನ್‌ ಭಾರತೀಯ ಅಧಿಕಾರಿಗಳಿಗೆ ತನ್ನ ಪ್ರಜೆಗಳನ್ನು ಭೇಟಿಯಾಗಲು ಅನುಮತಿ ನೀಡಿತ್ತು.

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿ 17 ಮಂದಿ ಭಾರತೀಯ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರ ಸುರಕ್ಷಿತ ಬಿಡುಗಡೆ ಸಂಬಂಧ ಭಾರತ ಸರ್ಕಾರ ಇರಾನ್‌ ಜೊತೆ ನಿರಂತರ ಮಾತುಕತೆ ನಡೆಸುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *