ಕಲಬುರಗಿ : ಬಾತ್ರೂಂನಲ್ಲಿ ಕದ್ದು ಮಹಿಳೆಯ ವಿಡಿಯೋ ಚಿತ್ರೀಕರಿಸಿದ ಸೆಕ್ಯೂರಿಟಿ ಗಾರ್ಡ್: ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ : ಸೆಕ್ಯೂರಿಟಿ ಗಾರ್ಡ್ವೊಬ್ಬ ಬಾತ್ ರೂಂನಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ವಿಡಿಯೋ ರೆಕಾರ್ಡ್ ಮಾಡಿ ಸಿಕ್ಕಿಬಿದ್ದಿರುವ ಘಟನೆ ಕಲಬುರಗಿ ನಗರದ ರಾಮ ಮಂದಿರ ವೃತ್ತದ ಬಳಿಯಿರುವ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.

Ad Widget ... ..

ವಿಶ್ವನಾಥ್ ವಿಡಿಯೋ ರೇಕಾರ್ಡ್ ಮಾಡಿ ಸಿಕ್ಕಿಬಿದ್ದ ಸೆಕ್ಯೂರಿಟಿ ಗಾರ್ಡ್. ಮಹಿಳೆ ಅಪಾರ್ಟ್ಮೆಂಟ್ ನಲ್ಲಿ ಬಾಡಿಗೆಗೆ ಇದ್ದಳು. ಆಕೆ ಬಾತ್ ರೂಂನಲ್ಲಿ ಇದ್ದ ವೇಳೆ ಸೆಕ್ಯೂರಿಟಿ ಗಾರ್ಡ್ ವಿಶ್ವನಾಥ್ ತನ್ನ ಸ್ಮಾರ್ಟ್ಫೋನ್ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾನೆ. ಈ ವಿಚಾರ ಮಹಿಳೆ ತಿಳಿದಿದ್ದು, ತಕ್ಷಣ ಗಂಡನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ.

Ad Widget

ಮಹಿಳೆಯ ಗಂಡ ಬಂದು ಅಪಾರ್ಟ್ಮೆಂಟ್ ಅಂಡರ್ ಗ್ರೌಂಡ್ ನಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಕಂಬಕ್ಕೆ ಕಟ್ಟಿ ಹೊಡೆದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸೆಕ್ಯೂರಿಟಿ ಗಾರ್ಡ್ ವಿಶ್ವನಾಥ್ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ನ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Leave a Comment

Your email address will not be published. Required fields are marked *