Ad Widget .

ಮೈಸೂರು : ಮೋದಿ ಪರ ಹಾಡು ಬರೆದ ಯುವಕನ ಮೇಲೆ ಮುಸ್ಲಿಮರಿಂದ ಹಲ್ಲೆ

ಸಮಗ್ರ ನ್ಯೂಸ್‌ : ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ನಡೆದಿದೆ.

Ad Widget . Ad Widget .

ರೋಹಿತ್ ಹಲ್ಲೆಗೆ ಒಳಗಾದ ಯುವಕ. ಈ ಸಂಬಂಧ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ರೋಹಿತ್‌ ದೂರು ನೀಡಿದ್ದು, ಹಲ್ಲೆಗೊಳಗಾದ ಯುವಕನನ್ನು ಪೊಲೀಸರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

Ad Widget . Ad Widget .

ನಾನು ಕಳೆದ ವಾರ ಮೋದಿ ಕುರಿತಾಗಿ ಸಾಂಗ್‌ ಮಾಡಿದ್ದೆ. ನಾನು ಜನರ ಜೊತೆ ಈ ಸಾಗ್‌ ತೋರಿಸಿ ಚಾನೆಲ್‌ ಸಬ್‌ಸ್ಕ್ರೈಬ್‌ ಮಾಡುವಂತೆ ಕೇಳಿಕೊಳ್ಳುತ್ತಿದ್ದೆ. ನಾನು ಸರ್ಕಾರಿ ಗೆಸ್ಟ್‌ ಹೌಸ್‌ನಲ್ಲಿ ಕುಳಿತುಕೊಂಡಿದಾಗ ಒಬ್ಬ ಹುಡುಗ ಬಂದಿದ್ದ. ಆತನಿಗೆ ತೋರಿಸಿದಾಗ ಆತ ಹಾಡು ಚೆನ್ನಾಗಿದೆ ಎಂದು ಹೇಳಿ ಬನ್ನಿ ನಾನು ನನ್ನ ಸ್ನೇಹಿತರಿಗೂ ತೋರಿಸುತ್ತೇನೆ ಎಂದು ನನ್ನನ್ನು ಆತನ ಸ್ನೇಹಿತರ ಬಳಿ ಕರೆದುಕೊಂಡು ಹೋದನು.

ಈ ವೇಳೆ ಅವರು ಮೋದಿ ಬಗ್ಗೆ ಹಾಡು ಮಾಡ್ತೀಯಾ ಎಂದು ಪ್ರಶ್ನಿಸಿ ಪಾಕಿಸ್ತಾನದ ಪರ ಅಲ್ಲಾಹ್‌ ಪರ ಘೋಷಣೆ ಕೂಗುವಂತೆ ಒತ್ತಾಯ ಮಾಡಿದರು. ಅಷ್ಟೇ ಅಲ್ಲದೇ ನನ್ನ ಬಟ್ಟೆ ಹರಿದು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ನನಗೆ ಅವರು ಮುಸ್ಲಿಮ್‌ ಹುಡುಗರು ಅಂತ ಗೊತ್ತಿರಲಿಲ್ಲ ಎಂದು ವಿಡಿಯೋದಲ್ಲಿ ರೋಹಿತ್‌ ಹೇಳಿದ್ದಾರೆ.

Leave a Comment

Your email address will not be published. Required fields are marked *