Ad Widget .

ರಾಜ್ಯವನ್ನು ಬೆಚ್ಚಿ ಬೀಳಿಸುತ್ತಿರುವ ಸಾಲು ಸಾಲು ಮರ್ಡರ್ ಕೇಸ್| ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದ ಸಿಎಂ

ಸಮಗ್ರ ನ್ಯೂಸ್: ಸಾಲು ಸಾಲು ಕೊಲೆ ಪ್ರಕರಣಗಳು ನಡೆಯುತ್ತಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಚುನಾವಣೆ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಒಂದೇ ದಿನದಲ್ಲಿ 12 ಕೊಲೆ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.

Ad Widget . Ad Widget .

ಡಿಜಿ & ಐಜಿಪಿ, ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಸೂಚಿದ್ದಾರೆ. ಇಂತಹ ಘಟನೆಗಳು ಮತ್ತೆ ಮರುಕಳಿಸಬಾರದು. ಆರೋಪಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

Ad Widget . Ad Widget .

ಚುನಾವಣೆ ಸಮಯದಲ್ಲಿ ನಗರದಲ್ಲಿ ಎಚ್ಚರಿಕೆ ವಹಿಸಬೇಕು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಪೊಲೀಸ್ ಮಹಾನಿರ್ದೇಶಕರಿಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ ನಿನ್ನೆ ಒಂದೇ ದಿನದಲ್ಲಿ 12 ಕೊಲೆ ಪ್ರಕರಣಗಳು ನಡೆದಿದೆ. ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಬರ್ಬರ ಹತ್ಯೆ, ಬೆಂಗಳೂರಿನಲ್ಲಿ ಜೋಡಿ ಕೊಲೆ, ಗದಗದಲ್ಲಿ ನಗರಸಭಾ ಉಪಾಧ್ಯಕ್ಷೆ ಮಗ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಹತ್ಯೆ ಸೇರಿದಂತೆ ಒಟ್ಟು 12 ಕೊಲೆಗಳು ನಡೆದಿವೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *