ರಾಯಚೂರು : ಕಲ್ಲಿನಿಂದ ಜಜ್ಜಿ ಹೆಂಡತಿಯನ್ನು ಕೊಂದು ತಾನು ನೇಣಿಗೆ ಶರಣು

ಸಮಗ್ರ ನ್ಯೂಸ್ : ಕ್ಷುಲ್ಲಕ ಕಾರಣಕ್ಕೆ ಗಂಡ- ಹೆಂಡತಿ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಯಚೂರಿನ ಸಿಂಧನೂರು ತಾಲೂಕಿನ ದಿದ್ದಿಗಿ ಗ್ರಾಮದಲ್ಲಿ ನಡೆದಿದೆ.

. Ad Widget . Ad Widget

ಕವಿತಾ (26) ಕೊಲೆಯಾದವಳು. ಭೀಮಣ್ಣ (28) ಎಂಬಾತ ಪತ್ನಿಯನ್ನು ಕೊಂದು ನೇಣಿಗೆ ಶರಣಾದವನು. ಕವಿತಾ ಹಾಗೂ ಭೀಮಣ್ಣ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಇಬ್ಬರಿಗೂ ಮದುವೆಯಾಗಿತ್ತು. ಇತ್ತೀಚೆಗೆ ಭೀಮಣ್ಣನಿಗೆ ಕವಿತಾಳನ್ನು ಅನುಮಾನ ದೃಷ್ಟಿಯಿಂದ ನೋಡುತ್ತಿದ್ದನು. ಆಕೆಯ ಶೀಲವನ್ನೂ ಕೂಡ ಶಂಕಿಸಿದ್ದು, ಇದೇ ವಿಚಾರಕ್ಕೆ ಪದೇಪದೆ ಪತ್ನಿ ಜತೆ ಜಗಳ ಮಾಡುತ್ತಿದ್ದರು.

. Ad Widget . . Ad Widget . Ad Widget

ಇದೇ ವಿಚಾರಕ್ಕೆ ಗಲಾಟೆ ನಡೆದು ಕೋಪದಲ್ಲಿ ಭೀಮಣ್ಣನ ಕಲ್ಲಿನಿಂದ ಕವಿತಾಳನ್ನು ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಆಕೆ ಮೃತಪಟ್ಟ ಕೂಡಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಳಗಾನೂರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಬಳಗಾನೂರು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

Leave a Comment

Your email address will not be published. Required fields are marked *