ಸಮಗ್ರ ಉದ್ಯೋಗ: ಭಾರತೀಯ ಕ್ರೀಡಾ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 25, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ವಿದ್ಯಾರ್ಹತೆ:
ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿಎ ಅಥವಾ ICWA, ಎಲ್ಎಲ್ಬಿ, ಬಿಇ/ಬಿ.ಟೆಕ್, ಎಂಬಿಬಿಎಸ್, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ವೇತನ:
ಮಾಸಿಕ ₹ 80,250
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.