Ad Widget .

ಮಣಿಪುರ: ಮತದಾನ ವೇಳೆ ಗುಂಡಿನ ದಾಳಿ- ಮೂವರು ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾದ ನಡೆದಿದ್ದು, ಈ ವೇಳೆ ಮತದಾನ ಕೇಂದ್ರದ ಬಳಿ ಗುಂಡಿನ ದಾಳಿ ನಡೆಸಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡದಿರುವ ಘಟನೆ ಇಂಫಾಲ್ ಪೂರ್ವ ಜಿಲ್ಲೆಯ ಮೊಯಿರಂಗ್ಕಂಪು ಸಜೆಬ್‌ನಲ್ಲಿ ನಡೆದಿದೆ.

Ad Widget . Ad Widget .

ಗುಂಡಿನ ದಾಳಿಯ ನಂತರ ಮೂವರು ಸ್ಥಳದಿಂದ ಪರಾರಿಯಾಗಿದ್ದರು. ಅವರನ್ನು ಶುಕ್ರವಾರ ಸಂಜೆ ಘಟನಾ ಸ್ಥಳದಿಂದ 5 ಕಿ.ಮೀ. ದೂರದಲ್ಲಿ ಬಂಧಿಸಲಾಗಿದೆ. ಬಂಧಿತರಿಂದ ಒಂದು ಪಿಸ್ತೂಲ್, ಮದ್ದುಗುಂಡು ಮತ್ತು 1.5 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಸದ್ಯ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad Widget . Ad Widget .

ಗುಂಡಿನ ದಾಳಿ ಮತದಾನದ ಹಕ್ಕನ್ನು ಚಲಾಯಿಸಲು ಸಾಲುಗಟ್ಟಿ ನಿಂತಿದ್ದ ಮತದಾರರಲ್ಲಿ ಭಯವನ್ನು ಉಂಟುಮಾಡಿದೆ. ಮತದಾನ ಪ್ರದೇಶದಲ್ಲಿ ಸುಮಾರು 10 ಸೆಕೆಂಡುಗಳ ಕಾಲ ಗುಂಡಿನ ಚಕಮಕಿ ನಡೆಯಿತು. ಘಟನೆಯಲ್ಲಿ ಸಾವು ನೋವು ವರದಿಯಾಗಿಲ್ಲ.

Leave a Comment

Your email address will not be published. Required fields are marked *