Ad Widget .

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಹತ್ಯೆ: ವಿದ್ಯಾರ್ಥಿ ಪರಿಷತ್‌ ಪ್ರತಿಭಟನೆ

ಸಮಗ್ರ ನ್ಯೂಸ್‌ : ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೀದರ್‌ ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

Ad Widget . Ad Widget .

ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ಗೆ ಸಲ್ಲಿಸಿದರು.

Ad Widget . Ad Widget .

ಜ್ಞಾನ ದೇಗುಲದಲ್ಲಿ ವಿದ್ಯಾರ್ಥಿನಿ ಹತ್ಯೆ ನಡೆದಿರುವುದು ಖಂಡನಾರ್ಹ. ಈ ಘಟನೆಯಿಂದ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ಸೃಷ್ಟಿಸಿದಂತಾಗಿದೆ. ಪ್ರೀತಿಸಲು ನಿರಾಕರಿಸಿದ್ದಕ್ಕೆ ಜಿಹಾದಿ ಕ್ರೂರ ಮನಃಸ್ಥಿತಿಯ ಫಯಾಜ್‌ ಎಂಬಾತ ಭೀಕರವಾಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರಮಟ್ಟಿಗೆ ಕುಸಿದಿದೆ ಎನ್ನುವುದನ್ನು ಈ ಘಟನೆ ತೋರಿಸುತ್ತದೆ’ ಎಂದು ಮನವಿಯಲ್ಲಿ ತಿಳಿಸಿದರು.

ಕೊಲೆಗಾರನಿಗೆ ಕಾನೂನಿನ ಯಾವುದೇ ಭಯ ಇಲ್ಲದೆ ರಾಜಾರೋಷವಾಗಿ ಕಾಲೇಜಿನ ಪ್ರಾಂಗಣದಲ್ಲಿ ವಿದ್ಯಾರ್ಥಿನಿಯ ಹತ್ಯೆ ಮಾಡಿದ್ದಾನೆ. ಈ ಘಟನೆಯಿಂದ ರಾಜ್ಯದ ವಿದ್ಯಾರ್ಥಿ ಸಮುದಾಯ ಭಯಭೀತಗೊಂಡಿದೆ. ಪೊಲೀಸರು ಸೂಕ್ತ ತನಿಖೆ ನಡೆಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ವಿದ್ಯಾರ್ಥಿನಿಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಪೊಲೀಸರು ರಾಜ್ಯದ ಶಾಲಾ-ಕಾಲೇಜುಗಳ ಬಳಿ ಮಫ್ತಿಯಲ್ಲಿ ಕೆಲಸ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಗಂಭೀರವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಎಬಿವಿಪಿ ಕಾರ್ಯದರ್ಶಿ ನಾಗರಾಜ, ಸಾಯಿ ಕಿರಣ್, ಅಭಿಷೇಕ್, ಶಂಭು, ವಿಶ್ವೇಶ್ವರ, ರಾಜಕುಮಾರ, ಶ್ವೇತಾ, ಸ್ವಾತಿ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

Leave a Comment

Your email address will not be published. Required fields are marked *