Ad Widget .

ಉಪ್ಪಿನಂಗಡಿ: ಕ್ಷುಲ್ಲಕ ಕಾರಣಕ್ಕೆ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕೆ 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ಏ.19ರಂದು ನಡೆದಿದೆ.

Ad Widget . Ad Widget .

ಉಪ್ಪಿನಂಗಡಿಯ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿ ವಿದ್ಯಾರ್ಥಿಯಾಗಿದ್ದ ನಂದನ್ (13) ಎಂಬಾತ ಆತ್ಮಹತ್ಯೆಗೆ ಶರಣಾದ ಬಾಲಕ.

Ad Widget . Ad Widget .

ಸುಳ್ಯ ತಾಲೂಕಿನ ‌ಪಂಜದ ದಿ. ರೋಹಿತ್ ಗೌಡ ಎಂಬವರ ಮಗನಾಗಿದ್ದ ಈತ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ತನ್ನ ಮಾವನ ಮನೆಯಲ್ಲಿದ್ದ. ಅಲ್ಲಿಂದಲೇ ಉಪ್ಪಿನಂಗಡಿಯ ಖಾಸಗಿ ಶಾಲೆಗೆ ಹೋಗುತ್ತಿದ್ದ. ಈತ ಈ ಬಾರಿ ಏಳನೇ ತರಗತಿ ಉತ್ತೀರ್ಣನಾಗಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ 8 ನೇ ತರಗತಿಗೆ ತೇರ್ಗಡೆ ಹೊಂದಿದ್ದ. ಏ.19ರಂದು ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮನೆಯಲ್ಲಿ ಒತ್ತಾಯಿಸಿದ್ದ. ಮನೆಯ ಇನ್ವಾರ್ಟರ್ ರಿಪೇರಿಗೆ ಬಂದಿರುವುದರಿಂದ ಇವತ್ತು ಬೇಡ ನಾಳೆ ಸೈಕಲ್ ರಿಪೇರಿ ಮಾಡಿಕೊಡಲಾಗುವುದೆಂದು ಮನೆಯವರು ಹೇಳಿದ್ದಾರೆ ಎನ್ನಲಾಗಿದೆ.

ಇದೇ ನೆಪವನ್ನು ಇಟ್ಟುಕೊಂಡು ಮನನೊಂದ ಬಾಲಕ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಎಲ್ಲಾ ವಿಚಾರವನ್ನು ಮನೆಯವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಸದ್ಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Leave a Comment

Your email address will not be published. Required fields are marked *