ಫಯಾಜ್ ನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ತೋರಣ ಕಟ್ತೇವೆ – ಅಲ್ತಾಫ್ ಹಳ್ಳೂರ

ಸಮಗ್ರ ನ್ಯೂಸ್: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹ ಹಿರೇಮಠಳನ್ನು ಚಾಕುವಿನಿಂದ ಭೀಕರವಾಗಿ ಹತ್ಯೆ ಮಾಡಿರುವ ಆರೋಪಿ ಫಯಾಜ್ ನನ್ನು ನಮಗೆ ಕೊಡಿ ಆತನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಕಟ್ಟುತ್ತೇವೆ ಎಂದು ಅಂಜುಮನ್ ಸಂಸ್ಥೆಯ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಆಕ್ರೋಶ ಹೊರಹಾಕಿದರು.

Ad Widget ... ..

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಫಯಾಜ್ ನನ್ನು ನಮಗೆ ಕೊಡಿ ತುಂಡು ತುಂಡು ಮಾಡಿ ಎಸೆಯುತ್ತೇವೆ.ಆರೋಪಿ ಫಯಾಜ್ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಕಟ್ಟುತ್ತೇವೆ. ಫಯಾಜ್ ನನ್ನು ಎನ್ ಕೌಂಟರ್ ಮಾಡುವಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದೇವೆ. ಹುಬ್ಬಳ್ಳಿ ಚನ್ನಮ್ಮ ಸರ್ಕಲ್, ಆರೋಪಿ ಎನ್ಕೌಂಟರ್ ಮಾಡಬೇಕು ಎಂದು ಕಿಡಿ ಕಾರಿದರು.

Ad Widget

ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದೇವೆ ನೇಹಾ ಹತ್ಯೆಯನ್ನು ನಾವು ಖಂಡಿಸುತ್ತೇವೆ.ಭಾರತೀಯ ಜನತಾ ಪಕ್ಷದವರು ಇದರಲ್ಲಿ ರಾಜಕೀಯ ಮಾಡಬಾರದು ಬಳಿಯಲ್ಲಿ ಅಂಜುಮನ್ ಸಂಸ್ಥೆ ಮುಖ್ಯಸ್ಥ ಅಲ್ತಾಫ್ ಹಳ್ಳೂರ್ ಹೇಳಿಕೆ ನೀಡಿದರು.

Leave a Comment

Your email address will not be published. Required fields are marked *