Ad Widget .

ವಿಜಯಪುರ: ನೇಹಾಳ ಹತ್ಯೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

ಸಮಗ್ರ ನ್ಯೂಸ್ : ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಪಯಾಜ್ ಎಂಬಾತ ಮಾಡಿರುವ ಭೀಕರ ಹತ್ಯೆಯನ್ನು ಖಂಡಿಸಿ ರಾಜ್ಯದ್ಯಂತ ಪ್ರತಿಭಟನೆಗೆ ಕರೆ ನೀಡಲಾಯಿತು.

Ad Widget . Ad Widget .

ಶಾಲಾ ಕಾಲೇಜುಗಳು ಜ್ಞಾನದ ದೇಗುಲಗಳು ಇಂತಹ ದೇಗುಲದಲ್ಲಿ ಹಾಡು ಹಗಲೇ ವಿದ್ಯಾರ್ಥಿನೇಹಾ ಹಿರೇಮಠಳನ್ನು ಭೀಕರ ಹತ್ಯೆಯನ್ನು ಮಾಡಿರುವ ಘಟನೆ ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ.

Ad Widget . Ad Widget .

ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವಳನ್ನು ಜಿಹಾದಿ ಕ್ರೂರ ಮನಸ್ಥಿತಿಯ ಪಯಾಜ್ ಎಂಬಾತ ಲವ್ ಜಿಹಾದಿಗಾಗಿ ಅವಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ, ಈ ಪ್ರೀತಿಯನ್ನು ವಿದ್ಯಾರ್ಥಿನಿ ನಿರಾಕರಿಸಿದಕ್ಕಾಗಿ ಆಕೆಯ ಕಾಲೇಜಿಗೆ ಅಕ್ರಮವಾಗಿ ಪ್ರವೇಶಿಸಿ ಚಾಕುವಿನಿಂದ 9 ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕಾಲೇಜಿನ ಒಳಗೆ ಬಂದು ವಿದ್ಯಾರ್ಥಿನಿಯನ್ನು ಹತ್ಯೆ ಮಾಡಲು ಸಾಧ್ಯವಾಗಿರಬೇಕಾದರೆ ಕೊಲೆಗಾರನಿಗೆ ಕಾನೂನಿನ ಯಾವುದೇ ಭಯವೂ ಇಲ್ಲದೆ ರಾಜಾರೋಷವಾಗಿ ಕೃತ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರೆ ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕುಸಿದು ಹೋಗಿದೆ ಎನ್ನುವುದು ಸ್ಪಷ್ಟವಾಗಿ ತಿಳಿಯುವಂತಾಗಿದೆ.

ಘಟನೆಯಿಂದ ರಾಜ್ಯದ ವಿದ್ಯಾರ್ಥಿ ಸಮುದಾಯ ಭಯಭೀತಗೊಂಡಿದೆ. ಪೊಲೀಸರು ಕೂಡಲೇ ಸೂಕ್ತ ತನಿಖೆಯನ್ನು ಕೈಗೊಂಡು, ಅಪರಾಧಿಗೆ ಉಗ್ರ ಶಿಕ್ಷೆ ಆಗುವ ಹಾಗೆ ಮಾಡಿ ವಿದ್ಯಾರ್ಥಿನಿಯ ಕುಂಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ. ಜತೆಗೆ ರಾಜ್ಯಾದ್ಯಂತ ಪೊಲೀಸರು ಶಾಲಾ ಕಾಲೇಜುಗಳ ಬಳಿ ಮಪ್ತಿಯಲ್ಲಿ ಕಾರ್ಯನಿರ್ವಹಿಸಿ ಸಂಭಾವ್ಯ ಘಟನೆಗಳನ್ನು ತಡೆಯಲು ಪ್ರಯತ್ನಿಸಬೇಕು.

ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ಕಾರ್ಯ ಪ್ರವೃತ್ತರಾಗಬೇಕು. ಸರ್ಕಾರಗಳು ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಕಾನೂನಿನ ಭಯ ಇಲ್ಲದಾಗ ಮಾತ್ರ ಇಂತಹ ಘಟನೆಗಳು ನಡೆಯಲು ಸಾಧ್ಯ ಕಾಲೇಜು ಕ್ಯಾಂಪಸ್‌ಗಳು ಸುರಕ್ಷತೆಯವ ಕೇಂದ್ರಗಳಾಗಬೇಕು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಗಮನಹರಿಸಬೇಕು ಹಾಗೂ ಉನ್ನತ ಮಟ್ಟದ ತನಿಖೆ ಮಾಡಬೇಕು, ಅಗತ್ಯ ಎಂದು ಕಂಡರೆ ಪ್ರಕರಣದ ತನಿಖೆಯನ್ನು ಗೆ ಹಸ್ತಾಂತರ ಮಾಡಬೇಕೆಂದು ಎಬಿವಿಪಿ ಆಗ್ರಹಿಸುತ್ತದೆ.

Leave a Comment

Your email address will not be published. Required fields are marked *