Ad Widget .

ಕೋಲಾರ : ಈ ದೇಶದ ಶನಿ ಮೋದಿ-ರಮೇಶ್ ಕುಮಾರ್

ಸಮಗ್ರ ನ್ಯೂಸ್‌ : ಈ ದೇಶಕ್ಕೆ ಹಿಡಿದಿರುವ ಶನಿ ಎಂದರೆ ಅದು ಮೋದಿ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.

Ad Widget . Ad Widget .

ಅವರು ಕೋಲಾರದಲ್ಲಿ ಮಾತನಾಡಿ, ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟು ಹೋಗಲಿ ಎಂದು. ದೇವರಲ್ಲಿ ಕೈ ಮುಗಿದು ಬೇಡಿಕೊಂಡಿದ್ದೇವೆ. ಇಂದಿರಾ ಗಾಂಧಿ ಕೂತಿದ್ದ ಸೀಟಲ್ಲಿ ಬಂದು ಕೂತುಬಿಟ್ಟೆ. ಎಲ್ಲಾ ಜಾತಿ ಜನಾಂಗದವರಿಗೆ ಆತ್ಮಸ್ಥೈರ್ಯ ತುಂಬಿದ್ದರು ಇಂದಿರಾ ಗಾಂಧಿ. ಎಂತಹವರ ಜಾಗಕ್ಕೆ ಎಂತಹವರು ಬಂದು ಕೂತಿದ್ದಾನೆ. ಸಂತೆಯಲ್ಲಿ ಹಾವಾಡಿಗ ಸುಳ್ಳು ಹೇಳೋದು ಕೇಳಿದ್ದೇವೆ. ಪ್ರಧಾನಿ ಸುಳ್ಳು ಹೇಳೋದು ಈ ಪ್ರಪಂಚದಲ್ಲಿಯೇ ಕೇಳಿರಲಿಲ್ಲ ಎಂದು ಪ್ರಧಾನಿ ವಿರುದ್ಧ ಏಕವಚನದಲ್ಲಿಯೇ ಆಕ್ರೋಶ ಹೊರಹಾಕಿದ್ದಾರೆ.

Ad Widget . Ad Widget .

ದೇವೇಗೌಡರ ನೆರಳಿಗೆ ಹೋಗಿ ಬದುಕಿ ಚೆನ್ನಾಗಿ ಆದವರು ಯಾರೂ ಇಲ್ಲ. ಚೆನ್ನಾಗಿ ಬದುಕಿದವರಿಗೇನು ಈ ಗತಿ ಬಂತು ಎಂದು ನನಗೆ ದುಃಖ. ಇರಲಿ, ರೈತನ ಮಗ ಎಂದು ಪ್ರಧಾನಿ ಮಾಡಿದ್ದೆವು. ಆತನ ಮಗ ಮುಖ್ಯಮಂತ್ರಿಯಾಗಿದ್ದರು.

ಇವರು ಸೇರಿದ್ದು ಬಿಜೆಪಿ ಜೊತೆಗೆ. ಒಬ್ಬ ಪ್ರಧಾನ ಮಂತ್ರಿ, ಒಬ್ಬ ಮುಖ್ಯಮಂತ್ರಿ ಮೂರು ಸೀಟುಗಳನ್ನ ತೆಗೆದುಕೊಂಡಿದ್ದಾರೆ ಈ ಬಾರಿ. ಅದರಲ್ಲೂ ಒಂದು ಮಗನಿಗೆ ಇನ್ನೊಂದು ಮೊಮ್ಮಗನಿಗೆ ಎಂದು ವ್ಯಂಗ್ಯವಾಡಿದ್ದಾರೆ. ಅಳಿಯನನ್ನು ನಿಮ್ಮ ಲೆಕ್ಕದಲ್ಲಿ ಕೊಡಿ ಎಂದು ಅಲ್ಲಿಗೆ ಕಳಿಸಿದ್ರು. ಇವರ ಹಣೆಬರಹಕ್ಕೆ ಅವರತ್ರ ಹೋಗಿ ಸಲಾಂ ಹೊಡೆಯುತ್ತಿದ್ದಾರೆ ಎಂದು ದೊಡ್ಡಗೌಡರ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

Leave a Comment

Your email address will not be published. Required fields are marked *