ಬೆಂಗಳೂರಿನಲ್ಲಿ ಕರಗ ಮಹೋತ್ಸವ: ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಏ.23 ರಂದು ಐತಿಹಾಸಿಕ ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಏ.23ರಂದು ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

Ad Widget ... ..

ಹಲಸೂರು ಗೇಟ್, ಎಸ್ಆರ್ ನಗರ, ವಿಲ್ಸನ್ ಗಾರ್ಡನ್, ಎಸ್‌ಜೆ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡುವಂತೆ ಆಯುಕ್ತ ದಯಾನಂದ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗುತ್ತಾರೆ. ಈ ವೇಳೆ ಕೆಲವು ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗುವ ಸಾಧ್ಯತೆ ಇದೆ. ಇದು ಸಾರ್ವಜನಿಕರ ಶಾಂತಿಗೆ‌ ಭಂಗ ಉಂಟು ಮಾಡುವ ಸಂಭವವಿದೆ.

Ad Widget

ಇದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಏ.23ರ ಬೆಳಗ್ಗೆ 6ಗಂಟೆಯಿಂದ ಮರುದಿನ 24ರ ಬೆಳಗ್ಗೆ 10ರವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಾಲ್ಕು ಠಾಣಾ ವ್ಯಾಪ್ತಿಯ ಬಾರ್ ರೆಸ್ಟೋರೆಂಟ್, ಮದ್ಯದ ಅಂಗಡಿಗಳು, ವೈನ್ ಶಾಪ್,‌ ಪಬ್‌ಗಳನ್ನು ಮುಚ್ಚಲು ಆದೇಶ ಹೊರಡಿಸಲಾಗಿದೆ.

Leave a Comment

Your email address will not be published. Required fields are marked *