ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ನಿಂದ ವ್ಯಕ್ತಿಯೋರ್ವನ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ಬಾಪೂಜಿನಗರದ ಗಂಗಮ್ಮ ದೇವಾಲಯದ ಬಳಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ ನಡೆದಿದೆ. ಮೂವರು ದುಷ್ಕರ್ಮಿಗಳು, ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

Ad Widget ... ..

ಮೆಂಟಲ್ ಸೂರಿ ಅಲಿಯಾಸ್ ಸುರೇಶ್ (45) ಕೊಲೆಯಾದ ವ್ಯಕ್ತಿ. ಈತ ಕಳ್ಳತನ ಹಾಗೂ ರಾಬರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಹಿನ್ನೆಲೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ಗಳ ಸಹಾಯದಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ವೈಯಕ್ತಿಕ ಕಾರಣಗಳಿಂದ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ.

Ad Widget

Leave a Comment

Your email address will not be published. Required fields are marked *