Ad Widget

ನೀತಿ ಸಂಹಿತೆ ಉಲ್ಲಂಘಿಸಿದ ಪ್ರಧಾನಿ ಮೋದಿ| ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣಗೈದು ವಿವಾದ

ಸಮಗ್ರ ನ್ಯೂಸ್: ಸ್ವತಃ ಪ್ರಧಾನಿ ನರೇಂದ್ರ ಮೋದಿಯೇ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ಅಲ್ಲದೆ ಧರ್ಮವನ್ನು ತಮ್ಮ ಚುನಾವಣಾ ಭಾಷಣದಲ್ಲಿ ಎಳೆದು ತರುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget

“ಈ ದೇಶದ ಸಂಪತ್ತಿನ ಮೇಲೆ ಮೊದಲ ಅಧಿಕಾರ ಇರುವುದು ಮುಸ್ಲಿಂ ಸಮುದಾಯಕ್ಕೆ ಎಂದು ಈ ಹಿಂದಿದ್ದ ಕಾಂಗ್ರೆಸ್ ಸರಕಾರ ಹೇಳಿತ್ತು. ಇದರ ತಾತ್ಪರ್ಯವೆಂದರೆ, ಯಾರಿಗೆ ಹೆಚ್ಚು ಮಕ್ಕಳಿದ್ದಾರೊ ಅವರಿಗೆ ದೇಶದ ಸಂಪತ್ತನ್ನು ಹಂಚುವುದಾಗಿದೆ. ಈ ಸಂಪತ್ತನ್ನು ನುಸುಳುಕೋರರಿಗೆ ಹಂಚಲಿದೆ. ನೀವು ಕಷ್ಟಪಟ್ಟು ದುಡಿದ ಸಂಪತ್ತು ಮತ್ತು ಹಣವನ್ನು ನುಸುಳುಕೋರರಿಗೆ ಹಂಚಬೇಕೆ? ಇದಕ್ಕೆ ನಿಮ್ಮ ಒಪ್ಪಿಗೆ ಇದೆಯೆ? ಇದನ್ನು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯೇ ಹೇಳುತ್ತಿದೆ. ದೇಶದ ವೈಯಕ್ತಿಕ ಆಸ್ತಿಗಳನ್ನು ಕಸಿದು, ಅದನ್ನು ಮುಸ್ಲಿಮರಿಗೆ ಕಾಂಗ್ರೆಸ್ ಹಂಚಲಿದೆ. ಇದು ನಗರ ನಕ್ಸಲರ ಯೋಜನೆಯಾಗಿದೆ. ಇದರಿಂದ ನಮ್ಮ ಹೆಣ್ಣು ಮಕ್ಕಳ ಮಂಗಳ ಸೂತ್ರ ಕೂಡಾ ಉಳಿಯುವುದಿಲ್ಲ. ಅಷ್ಟು ಅತಿರೇಕಕ್ಕೆ ಕಾಂಗ್ರೆಸ್ ಹೋಗಲೂ ಬಹುದು ಎಂದು ನಾನು ಹೇಳುತ್ತಿದ್ದೇನೆ” ಎಂದು ಪ್ರಧಾನಿ ಮೋದಿ ವಿವಾದಾತ್ಮಕ ಮತ್ತು ದ್ವೇಷ ಭಾಷಣಗೈದಿದ್ದಾರೆ.

Ad Widget . Ad Widget .

ಸದ್ಯ ಈ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಚುನಾವಣಾ ಆಯೋಗವೇನಾದರೂ ನಿದ್ರಿಸುತ್ತಿದೆಯೆ ಎಂದು ನೆಟ್ಟಿಗರು ಹಾಗೂ ವಿಪಕ್ಷಗಳು ಖಾರವಾಗಿ ಪ್ರಶ್ನಿಸಿವೆ.

ರಾಜಾಸ್ತಾನದ ಬನ್ಸ್ವಾರದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಸಮಾವೇಶದಲ್ಲಿ ಪಾಲ್ಗೊಂಡ ಅವರು, ಕಾಂಗ್ರೆಸ್ ಪ್ರಣಾಳಿಕೆಯನ್ನು ಕಟುವಾಗಿ ಟೀಕಿಸಿದರು. ಈ ಭರದಲ್ಲಿ ಮುಸ್ಲಿಂ ಸಮುದಾಯವನ್ನೂ ಎಳೆದು ತಂದ ಮೋದಿ, “ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಸಮುದಾಯಕ್ಕೆ ಹೆಚ್ಚು ಸಂಪತ್ತನ್ನು ಹಂಚುವುದೇ ಕಾಂಗ್ರೆಸ್ ಗ್ಯಾರಂಟಿ ಎಂದು ವಾಗ್ದಾಳಿ ನಡೆಸಿದರು. ಸುಮಾರು ಒಂದೂವರೆ ನಿಮಿಷದ ಈ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ.

Leave a Comment

Your email address will not be published. Required fields are marked *