Ad Widget .

ನಂಜನಗೂಡಿನಲ್ಲಿ ರೋಡ್ ಶೋ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಸಮಗ್ರ ನ್ಯೂಸ್‌ : ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಅಭ್ಯರ್ಥಿ ಎಸ್.ಬಾಲರಾಜು ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರೋಡ್ ಶೋ ನಡೆಸಿ ಅಬ್ಬರದ ಪ್ರಚಾರ ನಡೆಸಿದ್ದಾರೆ.

Ad Widget . Ad Widget .

ನಂಜನಗೂಡು ನಗರದ ಆರ್‌ಪಿ ರಸ್ತೆಯಲ್ಲಿರುವ ಚಿಂತಾಮಣಿ ಗಣಪತಿ ದೇವಾಲಯದ ಮುಂಭಾಗದಲ್ಲಿ ಬಿವೈ ವಿಜಯೇಂದ್ರ ಅವರಿಗೆ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತ ಕೋರಿದರು.

Ad Widget . Ad Widget .

ಆರ್ ಪಿ ರಸ್ತೆಯ ಮೂಲಕ ನಗರದ ಬಜಾರ್ ರಸ್ತೆಯಲ್ಲಿ ರೋಡ್ ಶೋ ನಡೆಸಿ ಬಿರುಸಿನ ಮತ ಪ್ರಚಾರ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, ಬಾಲರಾಜು ಅವರನ್ನು ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದು ಬರುತ್ತಾರೆ. ಸಂಸದರಾಗಿದ್ದ ಶ್ರೀನಿವಾಸ್ ಪ್ರಸಾದ್ ಅವರು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರನ್ನು ಅನುಸರಿಸಿಕೊಂಡು ಬಾಲರಾಜು ಅಭಿವೃದ್ಧಿಪಡಿಸಲಿದ್ದಾರೆ. ಕಾಂಗ್ರೆಸ್ನವರು ಹತ್ತು ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದರು . ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಒಂದು ಕೆ.ಜಿ ಅಕ್ಕಿಯನ್ನು ಕೊಟ್ಟಿಲ್ಲ. ‌

ನರೇಂದ್ರ ಮೋದಿ ಅವರು ಐದು ಕೆಜಿ ಅಕ್ಕಿ ಕೊಟ್ಟಿದ್ದಾರೆ. ಮನೆ ಮನೆಗೆ ಗಂಗೆ ಯೋಜನೆ ಸೇರಿದಂತೆ ವಿವಿಧ ಜನಪರ ಯೋಜನೆಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಭೀಕರ ಬರಗಾಲವಾಗಿದೆ. ತಮಿಳುನಾಡಿಗೆ ನೀರು ಹರಿಸುತ್ತಾರೆ. ಆದರೆ ನಮಗೆ ನೀರಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಣವನ್ನು ಬೇರೆ ಕಡೆ ವರ್ಗಾವಣೆ ಮಾಡಿದ್ದಾರೆ.

ಕಾಂಗ್ರೆಸ್ನವರು ಅಂಬೇಡ್ಕರ್ ಅವರ ಹೆಸರು ಹೇಳಿಕೊಂಡು ಅಂಬೇಡ್ಕರ್ ಅವರನ್ನೇ ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಉಚಿತ ಕೊಡುತ್ತೇವೆ ಎಂದು ಎಲ್ಲ ದರಗಳನ್ನು ಜಾಸ್ತಿಯಾಗಿದೆ. ರೈತರಿಗೆ ಬರೆ ಎಳೆಯುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾವು ತಕ್ಕ ಪಾಠ ಕಲಿಸಬೇಕು. ಬಿಜೆಪಿ ಅಭ್ಯರ್ಥಿ ಬಾಲರಾಜು ಅವರನ್ನು ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಹರ್ಷವರ್ಧನ್, ಎನ್. ಮಹೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಮೂರ್ತಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಎಸ್.ಸಿದ್ದರಾಜು, ನಗರಸಭಾ ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಮಾಜಿ ಜಿಪಂ ಸದಸ್ಯ ಚಿಕ್ಕರಂಗನಾಯಕ, ನಗರಸಭಾ ಸದಸ್ಯ ಮಹದೇವಪ್ರಸಾದ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಇದ್ದರು.

Leave a Comment

Your email address will not be published. Required fields are marked *