ಸಮಗ್ರ ನ್ಯೂಸ್: ರಾಮೇಶ್ವರ ಕೆಫೆ ಅವಘಡ ಮಾಸುವ ಮುನ್ನವೇ ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಹೋಟೆಲ್‌ಗೆ ಬಾಂಬ್ ಬೆದರಿಕೆ ಪತ್ರ ಬಂದಿದೆ. ಜಾಲಹಳ್ಳಿಯಲ್ಲಿರುವ ಕದಂಬ ಗಾರ್ಡೇನಿಯಾ ಹೋಟೆಲ್‌ಗೆ ಪತ್ರದ ಮೂಲಕ ಬೆದರಿಕೆ ಸಂದೇಶ ಬಂದಿದೆ. ಹೋಟೆಲ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಪತ್ರ ಬಂದಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಧಾವಿಸಿ ತನಿಖೆ ನಡೆಸುತ್ತಿದ್ದಾರೆ
ಪೋಸ್ಟ್ ಮೂಲಕ ಈ ಬೆದರಿಕೆ ಪತ್ರ ಬಂದಿದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಹಕರು ಹಾಗೂ ಹೋಟೆಲ್ ಸಿಬ್ಬಂದಿಯನ್ನು ಹೊರಗೆ ಕಳಿಸಿ ಹೋಟೆಲ್‌ನೊಳಗೆ ಜಾಲಹಳ್ಳಿ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಇಂದು ಮಧ್ಯಾಹ್ನ 12ರ ಸುಮಾರಿಗೆ ಪೋಸ್ಟ್ ಮುಖಾಂತರ ಬೆದರಿಕೆ ಪತ್ರವು ಹೋಟೆಲ್ ಸಿಬ್ಬಂದಿ ಕೈಸೇರಿದೆ.
ಈ ವಿಚಾರವಾಗಿ ಪೊಲೀಸರು ವಿಶೇಷ ತಂಡ ರಚನೆ ಮಾಡಿ ಪತ್ರದ ಸಂಬಂಧ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿಯನ್ನು ಪರಿಶೀಲನೆ ನಡೆಸಲಾಗುತ್ತಿದೆ.