Ad Widget .

ಬೀದರ್: ಎದೆಯ ಮೇಲೆ ಸಚಿವ ಈಶ್ವರ ಖಂಡ್ರೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ

ಸಮಗ್ರ ನ್ಯೂಸ್‌ : ನೆಚ್ಚಿನ ರಾಜಕೀಯ ನಾಯಕ, ಸಿನಿಮಾ ನಟ-ನಟಿಯರ ಪ್ರೀತಿ, ಅಭಿಮಾನಕ್ಕಾಗಿ ಹಲವು ಅಭಿಮಾನಿಗಳು ತಮ್ಮ ಎದೆಯ ಮೇಲೆ ಅಚ್ಚೆ ಹಾಕಿಸಿಕೊಂಡ ಉದಾಹರಣೆಗಳಿವೆ. ಅಭಿಮಾನ ತೋರಿಸಿಕೊಳ್ಳಲು ಅಭಿಮಾನಿಗಳು ನಾನಾ ಕಸರತ್ತು ನಡೆಸುತ್ತಾರೆ. ಇಲ್ಲೊಬ್ಬ ಅಭಿಮಾನಿ ತಮ್ಮ ಎದೆಯ ಮೇಲೆ ನೆಚ್ಚಿನ ನಾಯಕರಾದ ಅರಣ್ಯ, ಪರಿಸರ ಹಾಗೂ ಜೈವಿಕ ಖಾತೆ ಸಚಿವ ಈಶ್ವರ ಖಂಡ್ರೆ ಅವರ ಭಾವಚಿತ್ರದ ಟ್ಯಾಟೂ ಹಾಕಿಸಿಕೊಂಡು ಗಮನ ಸೆಳೆದಿದ್ದಾರೆ.

Ad Widget . Ad Widget .

ಬೀದರ್‌ ತಾಲೂಕಿನ ಕಮಠಾಣ ಶಿವಾಜಿ ಗಾಯಕವಾಡ ಎಂಬುವರು ತಮ್ಮ ಎದೆಯ ಎಡ ಭಾಗದ ಮೇಲೆ ಟ್ಯಾಟೂ ಹಾಕಿಸಿಕೊಂಡು ಗಮನ ಸೆಳೆದಿದ್ದಾರೆ.

Ad Widget . Ad Widget .

ಟ್ಯಾಟೂ ಹಾಕಿಸಿಕೊಂಡ ಶಿವಾಜಿ ಗಾಯಕವಾಡ ಮಾತನಾಡಿ, “ಕಳೆದ ಹತ್ತು ವರ್ಷಗಳಿಂದ ನಾನು ಸಚಿವ ಈಶ್ವರ ಖಂಡ್ರೆಯವರ ಅಭಿಮಾನಿ, ಅಂದಿನಿಂದ ಅವರ ಭಾವಚಿತ್ರದ ಟ್ಯಾಟೂ ಹಾಕಿಸಿಕೊಳ್ಳಬೇಕೆಂಬ ಆಸೆಯಿತ್ತು. ಈಗ ಎದೆಯ ಮೇಲೆ ಟ್ಯಾಟೂ ಹಾಕಿಸಿಕೊಂಡು ಈಶ್ವರ ಖಂಡ್ರೆ ಅವರನ್ನು ಭೇಟಿಯಾಗಿ ತೋರಿಸಿದ್ದೇನೆ. ಇಂದು ಕಮಠಾಣ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ ಅವರನ್ನು ಭೇಟಿಯಾಗಿ ಟ್ಯಾಟೂ ತೋರಿಸಿದ್ದೇನೆ” ಎಂದಿದ್ದಾರೆ.

Leave a Comment

Your email address will not be published. Required fields are marked *