ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವು

ಸಮಗ್ರ ನ್ಯೂಸ್: ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ.

Ad Widget ... ..

ಪ್ರವಾಸಕ್ಕೆ ಎಂದು ಹೋಗಿದ ಇವರೆಲ್ಲ ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಚಿಕ್ಕ ಮಗುವೊಂದು ಆಕಸ್ಮಿಕವಾಗಿ ನೀರಿಗೆ ಬಿದ್ದಿತ್ತು. ಮಗುವನ್ನು ರಕ್ಷಿಸಲು ಒಬ್ಬರ ಹಿಂದೆ ಒಬ್ಬರು ಹೋಗಿ 6 ಜನರು ಮೃತಪಟ್ಟಿದ್ದಾರೆ. ನಜೀರ್ ಅಹ್ಮದ್(40), ಅಲ್ಛೀಯಾ ಅಹ್ಮದ್(10), ಮೋಹಿನ್(6), ರೇಷಾ ಉನ್ನಿಸಾ(38), ಇಫ್ರಾ‌ ಅಹ್ಮದ್(15), ಅಬೀದ್ ಅಹ್ಮದ್(12) ಮೃತರಾಗಿದ್ದು, ಇವರೆಲ್ಲ ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳು ಎಂದು ಗುರುತಿಸಲಾಗಿದೆ.

Ad Widget

ಸದ್ಯ ಕಾಳಿ ನದಿಯಿಂದ ಆರು ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ದಾಂಡೇಲಿ ಆಸ್ಪತ್ರೆಗೆ ಶವಗಳನ್ನು ಸ್ಥಳಾಂತರ ಮಾಡಲಾಗಿದೆ. ದಾಂಡೇಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *