ಬಿಜೆಪಿ ಅಧಿಕಾರಕ್ಕೆ ಬಂದ್ರೆ‌ ಮಂಗಳಸೂತ್ರ ಮಾತ್ರವಲ್ಲ ಗಂಡ ಮಕ್ಳನ್ನೂ ಕಳೆದುಕೊಳ್ಳಬೇಕಾಗುತ್ತೆ – ಯತೀಂದ್ರ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ ಎಲ್ಲಾ ಮಹಿಳೆಯರ ಮಂಗಳಸೂತ್ರ ಮಾತ್ರವಲ್ಲ, ತಮ್ಮ ಗಂಡಂದಿರು, ಮಕ್ಕಳನ್ನ ಕಳೆದುಕೊಳ್ಳುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದರು.

Ad Widget ... ..

ಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿಕೆ ಕುರಿತು ಮೈಸೂರಿನಲ್ಲಿ ಸೋಮವಾರ ಖಾರವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಕೋಮುಗಲಭೆ, ದೋಂಬಿ ಮಾಡಿ ಅವರ ಮಕ್ಕಳನ್ನು ಸಾಯುವಂತೆ ಮಾಡುತ್ತದೆ.

Ad Widget

ಒಬ್ಬರನ್ನೊಬ್ಬರು ಬಡಿದಾಡುವಂತೆ ಮಾಡುತ್ತಾರೆ. ಮಕ್ಕಳನ್ನು ಕೋಮುಗಲಭೆಯಲ್ಲಿ ತೊಡಗಿಸಿ ನಿರುದ್ಯೋಗಿಯಾಗಿ ಮಾಡುತ್ತಾರೆ ಎಂದು ಆರೋಪಿಸಿದರು. ಪ್ರಧಾನಿಯಾದ ನರೇಂದ್ರ ಮೋದಿ ಅವರು ತುಚ್ಛವಾಗಿ ಮಾತನಾಡಿದ್ದಾರೆ. ಮತಿಯ ಭಾವನೆ ಕೆರಳಿಸುವ ರೀತಿ ಮಾತನಾಡಿದ್ದಾರೆ. ಚುನಾವಣಾ ಆಯೋಗ ಯಾಕೆ ಕಣ್ಣು ಮುಚ್ಚಿ ಕುಳಿತಿದೆ ಗೊತ್ತಿಲ್ಲ. 70 ವರ್ಷಗಳಿಂದ ವಿವಿಧ ಪಕ್ಷಗಳು ಆಡಳಿತ ನಡೆಸಿವೆ. ಯಾವ ಹಿಂದೂಗೆ ಅನ್ಯಾಯವಾಗಿಲ್ಲ ಎಂದು ಅವರು ತಿಳಿಸಿದರು.

Leave a Comment

Your email address will not be published. Required fields are marked *