Ad Widget .

ಆಕಸ್ಮಿಕವಾಗಿ ಕಾರು ಹರಿದು ಸ್ಥಳದಲ್ಲೇ ಮಗು ಸಾವು

ಸಮಗ್ರ ನ್ಯೂಸ್: ಆಕಸ್ಮಿಕವಾಗಿ ಮಗುವಿನ ಮೇಲೆ ಕಾರು ಹರಿದು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಎಚ್.ಎಸ್.ಆರ್‌. ಲೇಔಟ್‌ನ ಆಗರದಲ್ಲಿ ನಡೆದಿದೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Ad Widget . Ad Widget .

ಒಂದೂವರೆ ವರ್ಷದ ಶೈಜಾ ಜನ್ನತ್ ಮೃತ ಮಗು ಕಾರಿನ ಡೋರ್ ಬಳಿಯೇ ನಿಂತಿತ್ತು, ಆದರೆ ಮಗುವಿನ ತಂದೆ ನೋಡದೆ ಕಾರು ಚಲಾಯಿಸಿದ್ದರಿಂದ ಈ ದುರಂತ ಸಂಭವಿಸಿದೆ.

Ad Widget . Ad Widget .

ಸಂಬಂಧಿಗಳ ಮದುವೆ ಇದ್ದ ಕಾರಣ ಮಗುವಿನ ಕುಟುಂಬಸ್ಥರು ಚನ್ನಪಟ್ಟಣಕ್ಕೆ ಹೋಗಿದ್ದರು. ರಾತ್ರಿ ಹಿಂದಿರುಗಿದಾಗ ಮಗುವಿನ ತಂದೆ ಲಗೇಜ್‌ ತೆಗೆದು ಮನೆಯೊಳಗೆ ಇಡುತ್ತಿದ್ದರು. ಈ ವೇಳೆ ತಂದೆ ಹಿಂದೆಯೇ ಬಂದಿದ್ದ ಮಗು ಡೋರ್‌ ಬಳಿ ನಿಂತಿತ್ತು. ಅದನ್ನು ಗಮನಿಸದೇ ಕಾರು ಮುಂದೆ ಚಲಿಸಿದಾಗ ಮಗುವಿನ ಮೇಲೆ ಹರಿದಿದೆ. ಕಾರು ಹರಿದಿದ್ದರಿಂದ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಎಚ್.ಎಸ್.ಆರ್ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *