Ad Widget .

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ| ಕರ್ನಾಟಕದ ಅರ್ಜಿಗೆ ಕೊನೆಗೂ ಮನ್ನಣೆ; ಕೇಂದ್ರ ಸರ್ಕಾರಕ್ಕೆ ಮುಖಭಂಗ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಬರ ನಿರ್ವಹಣೆಗಾಗಿ ಹಣಕಾಸು ನೆರವು ನೀಡುವ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ಜಟಾಪಟಿ ಮತ್ತೊಂದು ಮಜಲು ತಲುಪಿದ್ದು, ನೆರವು ನೀಡುವುದರ ಕುರಿತು ಒಂದು ವಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ವಾಗ್ದಾನ ನೀಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕೋರ್ಟ್‌ನಲ್ಲಿ ವಿಚಾರಣೆ ಕಾಲಕ್ಕೆ, ‘ಕರ್ನಾಟಕದಲ್ಲಿ ಬರ ನಿರ್ವಹಣೆಗೆ ಹಣಕಾಸು ನೆರವು ನೀಡುವಂತೆ ರಾಜ್ಯ ಸರ್ಕಾರ ಮುಂದಿಟ್ಟಿರುವ ಬೇಡಿಕೆಯನ್ನು ಈಡೇರಿಸಲು ಚುನಾವಣಾ ಆಯೋಗ ಅನುಮತಿ ನೀಡಿದೆ’ ಎಂದು ಕೇಂದ್ರ ಮಾಹಿತಿ ನೀಡಿದೆ. ‘ವಾರದೊಳಗೆ ಬರ ಪರಿಹಾರ ಬಿಡುಗಡೆಯಾಗಲಿದ್ದು, ಸುಪ್ರೀಂ ಕೋರ್ಟ್‌ನ ಮಧ್ಯ ಪ್ರವೇಶದಿಂದ ರಾಜ್ಯಕ್ಕೆ ನ್ಯಾಯ ಸಿಕ್ಕಿದೆ’ ಎಂದು ಅಭಿಪ್ರಾಯಪಟ್ಟಿದೆ.

Ad Widget . Ad Widget . Ad Widget .

ಮುಖ್ಯಮಂತ್ರಿ ಸಿದ್ದರಾಮಯ್ಯ 2023ರ ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾಗಿದ್ದ ಮನವಿ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳದ ಕಾರಣ, ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ನ್ಯಾಯ ರಕ್ಷಣೆ ಹಾಗೂ ರಾಜ್ಯದ ಜನರ ಬರ ಪರಿಹಾರಕ್ಕಾಗಿ ನಡೆಸಿದ ಸುದೀರ್ಘ ಹೋರಾಟಕ್ಕೆ ಯಶಸ್ಸು ಸಿಕ್ಕಿದೆ.

ಬರ ಪರಿಹಾರ ಕೋರಿ ರಾಜ್ಯ ಸರ್ಕಾರ ಹಲವು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಅದಕ್ಕೆ ಸ್ಪಂದನೆ ಸಿಗದೇ ಇದ್ದುದರಿಂದ, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ತಾರತಮ್ಯ ಮಾಡುತ್ತಿದ್ದು, ರಾಜ್ಯಕ್ಕೆ ದ್ರೋಹ ಎಸಗಿದೆ’ ಎಂದು ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಕ್ರೋಶ ವ್ಯಕ್ತಪಡಿಸಿತ್ತು. ಬರಪರಿಹಾರ, ತೆರಿಗೆ ನ್ಯಾಯಕ್ಕಾಗಿ ದೆಹಲಿಯಲ್ಲಿ ಪ್ರತಿಭಟನೆಯನ್ನೂ ಸರ್ಕಾರ ನಡೆಸಿತ್ತು. ವಿಳಂಬವಾಗಿ ಮನವಿ ಸಲ್ಲಿಸಿದ್ದಕ್ಕೆ ಪರಿಹಾರ ನೀಡಲು ಸಾಧ್ಯವಾಗಿಲ್ಲ; ಇದರ ಹಿಂದೆ ಯಾವುದೇ ದುರುದ್ದೇಶವಿಲ್ಲ ಎಂದು ಕೇಂದ್ರ ಸರ್ಕಾರ ಹಲವು ಬಾರಿ ಹೇಳಿತ್ತು. ಬಳಿಕವೂ ‘ಸಂಘರ್ಷ’ ಮುಂದುವರಿದಿತ್ತು.

ಈ ಬೆಳವಣಿಗೆಗಳ ಬಳಿಕ ರಾಜ್ಯ ಸರ್ಕಾರ, ಬರ ಪರಿಹಾರ ಕೊಡಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಸೋಮವಾರ ಈ ಅರ್ಜಿ ಸುಪ‍್ರೀಂಕೋರ್ಟ್‌ ‍‍‍ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

Leave a Comment

Your email address will not be published. Required fields are marked *