Ad Widget .

ಲೈಂಗಿಕ ದೌರ್ಜನ್ಯ ಪ್ರಕರಣ| ಮುರುಘಾ ಶ್ರೀಗೆ ಮತ್ತೆ ಜೈಲೂಟ ಖಾಯಂ

ಸಮಗ್ರ ನ್ಯೂಸ್: ಮುರಘಾಶ್ರೀಗಳಿಗೆ ನೀಡಿದ್ದ ಜಾಮೀನು ಅನ್ನು ಸುಪ್ರಿಂಕೋರ್ಟ್ ರದ್ದುಮಾಡಿದ್ದು, ಒಂದು ವಾರದೊಳಗೆ ನ್ಯಾಯಾಂಗ ಬಂಧನಕ್ಕೆ ಹೋಗುವಂತೆ ಸುಪ್ರಿಂಕೋರ್ಟ್‌ಸೂಚನೆ ನೀಡಿದೆ.

Ad Widget . Ad Widget .

ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿಗಳು ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.

Ad Widget . Ad Widget .

ಪ್ರಕರಣದ ಹಿನ್ನೆಲೆ: ಮುರುಘಾ ಮಠದ ಹಾಸ್ಟೆಲ್‌ನ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಶಿವಮೂರ್ತಿ ಶ್ರೀಯನ್ನು ಕಳೆದ ಸೆಪ್ಟಂಬರ್‌ 2ರಂದು (2022) ಚಿತ್ರದುರ್ಗದ ಪೊಲೀಸರು ಬಂಧಿಸಿದ್ದರು.

ಚಿತ್ರದುರ್ಗದಲ್ಲಿರುವ ಮುರುಘಾ ಮಠದಲ್ಲಿಯೇ ಇದ್ದಾಗ ರಾತ್ರಿ ವೇಳೆ ಮಠಕ್ಕೆ ದಾಳಿ ನಡೆಸಿದ್ದ ಪೊಲೀಸರು ಪೋಕ್ಸೋ ಕಾಯ್ದೆಯಡಿ (POCSO Case) ಮುರುಘಾ ಶ್ರೀಯನ್ನು ಅರೆಸ್ಟ್‌ ಮಾಡಿದ್ದರು. ಮುರುಘಾ ಶ್ರೀ ವಿರುದ್ಧ ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ದೂರು ದಾಖಲಾದ ಏಳು ದಿನದ ಬಳಿಕ ಮುರುಘಾ ಶ್ರೀಯನ್ನು ಪೊಲೀಸರು ಬಂಧಿಸಿದ್ದರು.

Leave a Comment

Your email address will not be published. Required fields are marked *