ಸಮಗ್ರ ನ್ಯೂಸ್: ಲೋಕ ಚುನಾವಣೆಗೆ ದಿನಗಣನೆ ಬಾಕಿ ಇದೆ ಅಷ್ಟೇ, ಇದೇ ಹೊತ್ತಲ್ಲಿ ಕಾಂಗ್ರೆಸ್ ಬಿಜೆಪಿ ನಡುವೆ ಮಾತಿನ ವಾಗ್ಯುದ್ದ ನಡೆಯುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳಲ್ಲಿ ಹನುಮಾನ್ ಚಾಲೀಸಾ ಹೇಳುವುದೂ ಮಹಾ ಅಪರಾಧ. ಶೋಭಾ ಯಾತ್ರೆ ನಡೆಸಲೂ ಅಲ್ಲಿ ಅವಕಾಶ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಎಂದೂ ಅಭಿವೃದ್ಧಿ ರಾಜಕಾರಣವನ್ನು ಮಾಡಿಯೇ ಇಲ್ಲ. ಅದು ಮಾಡುತ್ತಿರುವುದು ವೋಟ್ ಬ್ಯಾಂಕ್ ಪಾಲಿಟಿಕ್ಸ್, ಒಂದು ಸಮುದಾಯದ ಓಲೈಕೆ ರಾಜಕಾರಣ ಎಂದೂ ಮೋದಿ ಟೀಕಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಮೊದಲ ಆದ್ಯತೆಯಾಗಿ ಹಂಚುತ್ತದೆ ಎಂಬ ಆರೋಪವನ್ನು ಮತ್ತೊಮ್ಮೆ ಪ್ರಸ್ತಾಪ ಮಾಡಿದ ಮೋದಿ, ನಾನು ಸತ್ಯ ಹೇಳಿದರೆ ಕಾಂಗ್ರೆಸ್‌ಗೆ ಮೆಣಸಿನ ಉರಿ ಬಿದ್ದಂತಾಗುತ್ತದೆ. ಈ ದೇಶದ ಸಂಪತ್ತಿನಲ್ಲಿ ಮುಸಲ್ಮಾನರಿಗೆ ಮೊದಲ ಪಾಲು ಸಿಗಬೇಕು ಎಂದು ಮನಮೋಹನ್ ಸಿಂಗ್ ತಾವು ಪ್ರಧಾನಿಯಾಗಿದ್ದ ಹೇಳಿದ್ದನ್ನು ನೀವು ಮರೆಯಬೇಡಿ. ನಿಮ್ಮ ಕೊರಳಿನ ಮಂಗಳಸೂತ್ರವನ್ನೂ ಅವರು ಬಿಡುವುದಿಲ್ಲ ಎಂದು ಎಚ್ಚರಿಸಿದರು.