Ad Widget .

ಮತದಾನಕ್ಕೆ ಪ್ರೆರೇಪಣೆ/ ಮೈಸೂರಿನಲ್ಲಿ ಪ್ರವಾಸಿ ತಾಣಗಳು ಬಂದ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ಹಿನ್ನಲೆಯಲ್ಲಿ ಮೈಸೂರು, ಮತದಾನದ ದಿನ ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗುತ್ತದೆ.

Ad Widget . Ad Widget .

ಮೈಸೂರಿನಲ್ಲಿ ಸಾಕಷ್ಟು ಪ್ರೇಕ್ಷಣೀಯ ಸ್ಥಳಗಳಿದ್ದು, ಮತದಾನದ ರಜೆಯನ್ನು ಭೇಟಿ ಮಾಡೋದಕ್ಕೆ ಜನ ಬಳಸುವ ಸಾಧ್ಯತೆ ಇರುವುದರಿಂದ ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳನ್ನು ಬಂದ್ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.

Ad Widget . Ad Widget .

ಏಪ್ರಿಲ್ 26ರಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರ ವ್ಯಾಪ್ತಿಯ ಮೈಸೂರು ಮೃಗಾಲಯ, ಕಾರಂಜಿ ಕೆರೆ ಸೇರಿದಂತೆ ಇತರ ಪ್ರವಾಸಿ ತಾಣಗಳನ್ನು ಮುಚ್ಚಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಏಪ್ರಿಲ್ 26 ರಂದು ಸಾರ್ವಜನಿಕರ ಪ್ರವೇಶಕ್ಕೆ ನಿಬರ್ಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತದಾನದ ದಿನ ಶುಕ್ರವಾರ ಬಂದ ಹಿನ್ನೆಲೆಯಲ್ಲಿ ಅನೇಕರು ವಾರಾಂತ್ಯಕ್ಕೆ ಮೈಸೂರಿಗೆ ಪ್ರವಾಸಕ್ಕೆ ಪ್ಲಾನ್ ರಚಿಸಲಿದ್ದಾರೆ. ಶನಿವಾರ, ಭಾನುವಾರ ರಜೆ ಇರುವ ಕಾರಣ ಮತದಾನ ಮಾಡದೇ ಪ್ರವಾಸಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ.

Leave a Comment

Your email address will not be published. Required fields are marked *