Ad Widget .

ಲೋಕಸಭಾ ಚುನಾವಣೆ – 2024| ಮೊದಲ ಹಂತದ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಒಂದೇ ದಿನ ಬಾಕಿ ಇದೆ. ಲೋಕ ಸಮರದಲ್ಲಿ ಗೆಲುವಿಗೆ ಕಾಂಗ್ರೆಸ್ ಮತ್ತು ಕಮಲ-ದಳ ಮೈತ್ರಿ ಪಡೆ ಅಬ್ಬರದ ಪ್ರಚಾರ ನಡೆಸಿ, ಭರ್ಜರಿ ಮತಯಾಚನೆ ಮಾಡಿದೆ. ಇವತ್ತು ರಾಜ್ಯದ 14 ಕ್ಷೇತ್ರ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.

Ad Widget . Ad Widget .

ಮೊದಲ ಹಂತದ 14 ಕ್ಷೇತ್ರಗಳಲ್ಲಿ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯವಾಗಲಿದೆ. ಈ ಹಿನ್ನೆಲೆ ಕೊನೆ ದಿನ ಎಲ್ಲಾ ಪಕ್ಷದ ಅಭ್ಯರ್ಥಿಗಳು ಅಬ್ಬರದ ಪ್ರಚಾರಕ್ಕೆ ಪ್ಲಾನ್ ಮಾಡಿದ್ದಾರೆ. ರಾಜ್ಯದಲ್ಲಿ ಮೊದಲ ಹಂತದ 14 ಕ್ಷೇತ್ರಗಳಿಗೆ, ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು. ಬಳಿಕ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶ ಇರಲಿದೆ.

Ad Widget . Ad Widget .

Leave a Comment

Your email address will not be published. Required fields are marked *