ಸಮಗ್ರ ಉದ್ಯೋಗ: ಇಂಟರ್ನ್ಯಾಷನಲ್ ಫೈನಾನ್ಸಿಯಲ್ ಸರ್ವೀಸಸ್ ಸೆಂಟರ್ಸ್ ಅಥಾರಿಟಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಆಫೀಸರ್ ಗ್ರೇಡ್ ಎ (ಅಸಿಸ್ಟೆಂಟ್ ಮ್ಯಾನೇಜರ್) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 28, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು.
ಶೈಕ್ಷಣಿಕ ಅರ್ಹತೆ:
ಇಂಟರ್ನ್ಯಾಷನಲ್ ಫೈನಾನ್ಸಿಯಲ್ ಸರ್ವೀಸಸ್ ಸೆಂಟರ್ಸ್ ಅಥಾರಿಟಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ CA, CFA, CS, ICWA, ಪದವಿ, LLB, ಸ್ನಾತಕೋತ್ತರ ಪದವಿ, ಕಂಪ್ಯೂಟರ್ ಅಪ್ಲಿಕೇಶನ್/ಮಾಹಿತಿ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇಂಟರ್ನ್ಯಾಷನಲ್ ಫೈನಾನ್ಸಿಯಲ್ ಸರ್ವೀಸಸ್ ಸೆಂಟರ್ಸ್ ಅಥಾರಿಟಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 1, 2024 ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (UR) ಅಭ್ಯರ್ಥಿಗಳು: 10 ವರ್ಷಗಳು
PwBD (OBC) ಅಭ್ಯರ್ಥಿಗಳು: 13 ವರ್ಷಗಳು
PwBD (SC/ST) ಅಭ್ಯರ್ಥಿಗಳು: 15 ವರ್ಷಗಳು
ವೇತನ:
ಮಾಸಿಕ ₹ 44,500-1,43,000
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳು: ರೂ.100/-
UR/OBC/EWS ಅಭ್ಯರ್ಥಿಗಳು: ರೂ.1000/-
ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://ibpsonline.ibps.in/ifscaofeb24/ apply here