Ad Widget .

ಪ್ರಚಾರದ ವೇಳೆ ಮೈತ್ರಿ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಶಾಸಕರ ನಡುವೆ ಕಿರಿಕಿರಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಅಬ್ಬರದ ಪ್ರಚಾರವನ್ನು ಎಲ್ಲಾ ಪಕ್ಷಗಳು ನಡೆಸುತ್ತಿದೆ. ಅದರಂತೆ ಇಂದು ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ರೋಡ್​ ಶೋ ನಡೆಸಿದ್ದು, ಈ ವೇಳೆ ಕಿರಿಕ್ ಉಂಟಾಗಿದೆ. ಮೈತ್ರಿ ಅಭ್ಯರ್ಥಿ ಮಲ್ಲೇಶ್​ ಬಾಬು ರೋಡ್​ ಶೋಗೆ ರಸ್ತೆಯಲ್ಲಿ ಜನ ಜಮಾಯಿಸಿದ್ಧರು.

Ad Widget . Ad Widget .

ಈ ವೇಳೆ ಕಾರಿನಲ್ಲಿ ಬಂದ ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್​.ಎನ್​ನಾರಾಯಣಸ್ವಾಮಿ ಎದುರು ಬಿಜೆಪಿ ಹಾಗೂ ಜೆಡಿಎಸ್​ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ. ಈ ಹಿನ್ನೆಲೆ ಕಾರಿನಿಂದ ಹೊರಬಂದು ಶಾಸಕ ನಾರಾಯಣಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಶಾಸಕರ ಬೆಂಬಲಿಗರಿಂದ ಎಸ್.ಎನ್.- ಎಸ್.ಎನ್. ಎಂದು ಘೋಷಣೆ ಕೂಗಿದ್ದು, ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬಳಿಕ ಶಾಸಕರನ್ನು ಹಾಗೂ ಕೆಲ ಮುಖಂಡರನ್ನು ಪೊಲೀಸರು ಸಮಾಧಾನ ಪಡಿಸಿ ಕಳಿಸಿದ್ದಾರೆ

Ad Widget . Ad Widget .

Leave a Comment

Your email address will not be published. Required fields are marked *