ಮಾದಕವಸ್ತು ಸಾಗಾಟ ಹಿನ್ನಲೆ| ಮಾಲು ಸಮೇತ ಕೇರಳ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿಗಳು

ಸಮಗ್ರ ನ್ಯೂಸ್: ಮಾದಕ ವಸ್ತುವಿನ ಸಾಗಾಟ ನಡೆಸಿದ ಸುಳ್ಯ ಮೂಲದ ಇಬ್ಬರು ಯುವಕರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿಗಳಿಗೆ ಸೇರಿದ 1.5 ಲಕ್ಷ ರೂ. ಮೌಲ್ಯದ ಎಂಡಿಎಂಎಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Ad Widget ... ..

ಬಂಧಿತರನ್ನು ಸುಳ್ಯದ ಅಲೆಟ್ಟಿ ನಿವಾಸಿಗಳಾದ ಉಮ್ಮರ್ ಫಾರೂಕ್ (33) ಮತ್ತು ಎ.ಎಚ್.ಸಿದ್ದೀಕ್ ಎಂದು ಗುರುತಿಸಲಾಗಿದೆ. ಮಾನಂದವಾಡಿ ಅಬಕಾರಿ ವೃತ್ತ ನಿರೀಕ್ಷಕ ಎ ಪ್ರಜಿತ್ ನೇತೃತ್ವದ ತಂಡವು ಮಿಂಚಿನ ದಾಳಿ ನಡೆಸುವ ಮೂಲಕ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಎಂಡಿಎಂಎಯನ್ನು ಪ್ರತಿ ಗ್ರಾಂಗೆ 4000 ರೂ.ಗೆ ಮಾರಾಟ ಮಾಡುವ ಗುರಿಯನ್ನು ಹೊಂದಲಾಗಿತ್ತು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Ad Widget

Leave a Comment

Your email address will not be published. Required fields are marked *