ಸಮಗ್ರ ಉದ್ಯೋಗ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಏಪ್ರಿಲ್ 30, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ. ಸುರತ್ಕಲ್ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.
ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಮೆಕ್ಯಾನಿಕಲ್/ಪ್ರೊಡಕ್ಷನ್ ಇಂಜಿನಿಯರಿಂಗ್/ಆಟೋಮೊಬೈಲ್ ಇಂಜಿನಿಯರಿಂಗ್/ಮೆಕಟ್ರಾನಿಕ್ಸ್ ಇಂಜಿನಿಯರಿಂಗ್/ಮೆಟಲರ್ಜಿ ಇಂಜಿನಿಯರಿಂಗ್/ಇಂಡಸ್ಟ್ರಿಯಲ್ ಇಂಜಿನಿಯರಿಂಗ್/ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್/ಕೆಮಿಕಲ್ ಇಂಜಿನಿಯರಿಂಗ್ ನಲ್ಲಿ B.E ಅಥವಾ B.Tech, ಮ್ಯಾನುಫ್ಯಾಕ್ಚರಿಂಗ್/ಪ್ರೊಡಕ್ಷನ್ ಇಂಜಿನಿಯರಿಂಗ್/ವೆಲ್ಡಿಂಗ್ ಟೆಕ್ನಾಲಜಿ/ಮೆಷಿನ್ ಡಿಸೈನ್/ಮೆಕಾಟ್ರಾನಿಕ್ಸ್/ಪವರ್ ಎಲೆಕ್ಟ್ರಾನಿಕ್ಸ್/ಕಂಟ್ರೋಲ್ ಇಂಜಿನಿಯರಿಂಗ್/ಆಟೋಮೊಬೈಲ್ ಇಂಜಿನಿಯರಿಂಗ್/ಮಷಿನ್ ಡೈನಾಮಿಕ್ಸ್/ಕೆಮಿಕಲ್ ಇಂಜಿನಿಯರಿಂಗ್ ನಲ್ಲಿ M.E ಅಥವಾ M.Tech ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 32 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 31,000
ಉದ್ಯೋಗದ ಸ್ಥಳ:
ಸುರತ್ಕಲ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕು.