ಸಮಗ್ರ ಉದ್ಯೋಗ: ಮಂಗಳೂರು ವಿಶ್ವವಿದ್ಯಾಲಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಆಫ್ಲೈನ್ ಅಥವಾ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕು. ಏಪ್ರಿಲ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ವಿದ್ಯಾರ್ಹತೆ:
ಮಂಗಳೂರು ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಫಿಜಿಕ್ಸ್/ಮೆಡಿಕಲ್ ಫಿಜಿಕ್ಸ್ನಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಮಂಗಳೂರು ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ತಿಳಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 31,000
ಉದ್ಯೋಗದ ಸ್ಥಳ:
ಮಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಪ್ರೊ. ಕರುಣಾಕರ ಎನ್
ಸಂಯೋಜಕರು ಮತ್ತು ಪ್ರಧಾನ ತನಿಖಾಧಿಕಾರಿಗಳು
BRNS ಸಂಶೋಧನಾ ಯೋಜನೆ
ಪರಿಸರದ ವಿಕಿರಣಶೀಲತೆಯ ಸುಧಾರಿತ ಸಂಶೋಧನಾ ಕೇಂದ್ರ (CARER)
ಮಂಗಳೂರು ವಿಶ್ವವಿದ್ಯಾನಿಲಯ
ಮಂಗಳಗಂಗೋತ್ರಿ – 574199
ಅಥವಾ [email protected] ಗೆ ಇಮೇಲ್ ಮಾಡಿ.