Ad Widget .

ಲಾರಿಗೆ ಬೊಲೆರೋ ವಾಹನ ಡಿಕ್ಕಿ… ಇಬ್ಬರು ಸಾವು

ಸಮಗ್ರ ನ್ಯೂಸ್: ಲಾರಿಯ ಹಿಂಬದಿಗೆ ಬೊಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ (NH 48) ನಡೆದಿದೆ.

Ad Widget . Ad Widget .

ಈ ಹೆದ್ದಾರಿಯಲ್ಲಿ ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ ಹಿಂಬದಿಯಿಂದ ಬಂದ ಬೊಲೆರೋ ವಾಹನ ಡಿಕ್ಕಿಯಾಗಿದೆ. ಬೊಲೆರೋ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತರು. ಈ ಮೃತಪಟ್ಟ ವ್ಯಕ್ತಿಗಳು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು. ಬೊಲೆರೋದಲ್ಲಿ ದ್ರಾಕ್ಷಿ ತುಂಬಿಕೊಂಡು ಬೆಂಗಳೂರು ಕಡೆ ಬರುವಾಗ ಅಪಘಾತ ನಡೆದಿದೆ. ಬೊಲೆರೋ ವಾಹನ ಚಾಲಕನಿಗೆ ತೀವ್ರ ಗಾಯಗಳಾಗಿದ್ದು, ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Ad Widget . Ad Widget .

Leave a Comment

Your email address will not be published. Required fields are marked *