Ad Widget .

ಲೋಕಸಭಾ ಚುನಾವಣೆ – 2024| ಹಾಸನ ಕ್ಷೇತ್ರದಲ್ಲೀಗ ರಾಸಲೀಲೆಯದ್ದೇ ಸುದ್ದಿ!!

ಸಮಗ್ರ ನ್ಯೂಸ್: ಹಾಸನ ಲೋಕಸಭಾ ಕ್ಷೇತ್ರದ ರಾಜಕೀಯ ಪಕ್ಷವೊಂದರ ಅಭ್ಯರ್ಥಿಯೊಬ್ಬರಿಗೆ ಸೇರಿದೆ ಎನ್ನಲಾದ ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಸುದ್ದಿ ಕ್ಷೇತ್ರದಾದ್ಯಂತ ಚುನಾವಣೆಯಲ್ಲಿ ಭಾರಿ ಸಂಚಲನ ಉಂಟು ಮಾಡಿದೆ.

Ad Widget . Ad Widget .

ಕಳೆದ ಮೂರು ದಿನಗಳಿಂದ ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು, ಅಂತೆ ಕಂತೆಗಳು ಹರಿದಾಡುತ್ತಿವೆ. ಆದರೆ, ಈ ವಿಡಿಯೋಗಳನ್ನು ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪ್ರತಿಪಾದಿಸಿರುವ ಅಭ್ಯರ್ಥಿಯ ಬೆಂಬಲಿಗರು ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದಾರೆ.

Ad Widget . Ad Widget .

ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಇಷ್ಟು ದಿನಗಳ ಬಳಿಕ ಇದೀಗ ಕೊನೆಯ ಹಂತದಲ್ಲಿ ಈ ರಾಸಲೀಲೆಯ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಬಗ್ಗೆ ಚರ್ಚೆ ನಡೆಯುತ್ತಿರುವುದು ಕುತೂಹಲ ಮೂಡಿದ್ದು, ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಶರಣಾಗಿದ್ದಾರೆ.

ಈ ಪೆನ್‌ಡ್ರೈವ್ ನಲ್ಲಿ ನೂರಾರು ವಿಡಿಯೋಗಳಿವೆ ಎನ್ನಲಾಗುತ್ತಿದೆ. ಇದರಲ್ಲಿರುವ ಎನ್ನಲಾದ ಅಭ್ಯರ್ಥಿ ತನ್ನ ಬಳಿ ಸಹಾಯ ಕೇಳಿಕೊಂಡು ಬರುವ ಮಹಿಳೆಯರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದ. ಆ ಲೈಂಗಿಕ ಚಟುವಟಿಕೆಯನ್ನು ತಾನೇ ವಿಡಿಯೋ ಮಾಡಿಟ್ಟುಕೊಳ್ಳುತ್ತಿದ್ದ. ಈಗಾಗಲೇ ಕ್ಷೇತ್ರದ ಹಲವರು ಈ ವಿಡಿಯೋಗಳನ್ನು ನೋಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅದರ ತುಣುಕುಗಳು ಹರಿದಾಡುತ್ತಿವೆ. ಈ ವಿಡಿಯೋ ತುಣುಕುಗಳಲ್ಲಿ ಕೆಲವು ಸಂಘಟನೆಗಳಿಗೆ ಸೇರಿದ ಮಹಿಳೆಯರು, ಅಭ್ಯರ್ಥಿಯ ಪಕ್ಷದ ಮುಖಂಡರ ಪತ್ನಿಯರು ಇದ್ದಾರೆ. ಮನೆ ಕೆಲಸದ ಮಹಿಳೆಯರೂ ಇದ್ದಾರೆ ಎಂಬ ಚರ್ಚೆ ಬಿರುಸಿನಿಂದ ನಡೆದಿದೆ.

Leave a Comment

Your email address will not be published. Required fields are marked *