ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರು ಸಾವು

ಸಮಗ್ರ ನ್ಯೂಸ್: ಬೆಂಗಳೂರಿನ ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಆಂಧ್ರಪ್ರದೇಶದ ಮೂವರು ಯುವಕರು ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿದೆ.. ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯು ವ್ಯಕ್ತವಾಗಿದೆ.

Ad Widget ... ..

ಮೃತದೇಹವನ್ನು ನೋಡಿ ಇಂದು ಬೆಳಗ್ಗೆ ಸ್ಥಳೀಯರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಯುವಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

Ad Widget

ಮೃತರನ್ನು ಆಂಧ್ರಪ್ರದೇಶದ ಚಿತ್ತೂರು ಮೂಲದವರೆಂದು ತಿಳಿದು ಬಂದಿದೆ. ಶಶಿಕುಮಾರ್ (23), ಲೋಕೇಶ್ (25) ಮೃತ ದುರ್ದೈವಿಗಳು. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *