Ad Widget

ಕಳಚಿದ ಯಕ್ಷರಂಗದ ಹಿರಿಯ ಕೊಂಡಿ| ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಸಮಗ್ರ ನ್ಯೂಸ್: ಬಡಗುತಿಟ್ಟು ಯಕ್ಷಗಾನದ ಹಿರಿಯ ಭಾಗವತ ಸುಬ್ರಮಣ್ಯ ಧಾರೇಶ್ವರ (67) ವಿಧಿವಶರಾಗಿದ್ದಾರೆ. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು ಏಪ್ರಿಲ್‌ 25 ರಂದು ಬೆಳಗ್ಗೆ 4.30ಕ್ಕೆ ಬೆಂಗಳೂರಿನಲ್ಲಿರುವ ತಮ್ಮ ಪುತ್ರನ ನಿವಾಸದಲ್ಲಿ ನಿಧನರಾಗಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget

ಯಕ್ಷಗಾನ ಕ್ಷೇತ್ರದಲ್ಲಿ ಸುಮಾರು 46 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಭಾಗವತ ಸುಬ್ರಮಣ್ಯ ಧಾರೇಶ್ವರ ಅವರು ಕಾಳಿಂಗ ನಾವುಡರ ಅಗಲುವಿಕೆಯ ಬಳಿಕ ಉಂಟಾಗಬಹುದಿದ್ದ ನಿರ್ವಾತವನ್ನು ತುಂಬಲು ಯತ್ನಿಸಿದ್ದ ಭಾಗವತ ಶ್ರೇಷ್ಠ ಎನಿಸಿಕೊಂಡಿದ್ದರು. ಮೂಲತಃ ಗೋಕರ್ಣ ಮೂಲದವಾರದ ಭಾಗವತ ಸುಬ್ರಮಣ್ಯ ಧಾರೇಶ್ವರ ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Ad Widget . Ad Widget .

ಯಕ್ಷಗಾನದಲ್ಲಿ ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು. ಸುಬ್ರಮಣ್ಯ ಧಾರೇಶ್ವರ ಎನ್ನುವ ಹೆಸರು ಜನಪ್ರಿಯತೆಯಲ್ಲಿರುವಾಗಲೇ ಏಕಾಏಕಿ ಮೇಳ ತಿರುಗಾಟ ನಿಲ್ಲಿಸಿದ್ದರು. 10 ವರ್ಷದ ಬಳಿಕ ಮತ್ತೆ ಅದೇ ಮೇಳಕ್ಕೆ ಅನಿವಾರ್ಯ ಸಂದರ್ಭದಲ್ಲಿ ಸೇರಿ ಒಂದು ವರ್ಷದ ತಿರುಗಾಟ ಮಾಡಿದ್ದರು. ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು.

ಸುಬ್ರಮಣ್ಯ ಧಾರೇಶ್ವರ ಪೆರ್ಡೂರು ಮೇಳವೊಂದರಲ್ಲೇ 28 ವರ್ಷಗಳ ಕಾಲ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಅದಕ್ಕೂ ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಭಾಗವತರಾಗಿ ಯಕ್ಷ ಸೇವೆ ಸಲ್ಲಿಸಿದ್ದರು. ಸುಮಾರು 46 ವರ್ಷಗಳ ಕಾಲದ ಯಕ್ಷ ಪಯಣದಲ್ಲಿ ಸುಬ್ರಮಣ್ಯ ಧಾರೇಶ್ವರ ಅವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದು, ಭಾಗವತರ ಅಗಲಿಕೆಯಿಂದ ಅಭಿಮಾನಿಗಳಲ್ಲಿ ದುಃಖ ಮಡುಗಟ್ಟಿದೆ.

Leave a Comment

Your email address will not be published. Required fields are marked *