ಸುಳ್ಯ: ಬೈಕ್‌ ಮೇಲೆ ಪಲ್ಟಿ ಹೊಡೆದ ಜೀಪು| ಗಂಭೀರ ಗಾಯಗೊಂಡಿದ್ದ ಸವಾರ ಸಾವು

ಸಮಗ್ರ ನ್ಯೂಸ್: ಜೀಪೊಂದು‌ ಬೈಕ್ ಮೇಲೆ‌ ಮಗುಚಿ ಬಿದ್ದ ಪರಿಣಾಮ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿರುವ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮಾರ್ಗ ಎಂಬಲ್ಲಿ ನಡೆದಿದೆ.

Ad Widget ... ..

ಅಪಘಾತದಲ್ಲಿ ಅಜ್ಜಾವರ ಮೂಲದ ದಂಪತಿಗಳು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ಪೈಕಿ ವಿನಾಯಕ ಮೂರ್ತಿ ಎಂಬುವವರು ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು, ಇವರ ಪತ್ನಿಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

Ad Widget

ಮೃತಪಟ್ಟ ವ್ಯಕ್ತಿಯ ಮೃತದೇಹ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಇರುವುದಾಗಿ ತಿಳಿದುಬಂದಿದೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

Leave a Comment

Your email address will not be published. Required fields are marked *