ಶಿವಮೊಗ್ಗ: ಜೀಪ್‌ ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಮೃತ್ಯು

ಸಮಗ್ರ ನ್ಯೂಸ್‌ : ಜೀಪ್‌ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಾಲಕ ಮೃತಪಟ್ಟಿರುವ ಘಟನೆ ಹೊಸನಗರ ತಾಲೂಕಿನ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪ ನಡೆದಿದೆ.

Ad Widget ... ..

ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ. 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್‌ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದು ಉರುಳಿ ಬಿದ್ದಿದೆ.

Ad Widget

ಅಪಘಾತದಲ್ಲಿ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ನಿಂಗರಾಜ್ ಕೆ.ವೈ. ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

Leave a Comment

Your email address will not be published. Required fields are marked *