Ad Widget

ಚೆನ್ನೈ: ಮೋದಿಯನ್ನು ತಿಹಾರ್ ಜೈಲಿನಲ್ಲಿಟ್ಟು ದೇಶದಲ್ಲಿ ಚುನಾವಣೆ ನಡೆಸಬೇಕು- ಮನ್ಸೂರ್ ಅಲಿ ಖಾನ್

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದಿರುವ ತಮಿಳು ಚಿತ್ರರಂಗದ ಖ್ಯಾತ ಮನ್ಸೂರ್ ಅಲಿ ಖಾನ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಿಡಿಕಾರಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget

ಚೆನ್ನೈನ ಕಾಂಗ್ರೆಸ್‌ ಭವನದಲ್ಲಿ ಇಂದು ಮನ್ಸೂರ್ ಅಲಿ ಖಾನ್ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಸೆಲ್ವ ಪೆರುಂಡಗೈ ಅವರನ್ನು ಭೇಟಿಯಾದರು. ಈ ವೇಳೆ ಮಾತನಾಡಿದ ಮನ್ಸೂರ್ ಅಲಿ ಖಾನ್ ನಾನು ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಲು ಬಯಸುತ್ತೇನೆ ಎಂದಿದ್ದಾರೆ.

Ad Widget . Ad Widget . Ad Widget .

ತಮಿಳುನಾಡಿನಲ್ಲಿ ಏಪ್ರಿಲ್ 19ರಂದು ಲೋಕಸಭಾ ಚುನಾವಣೆಗೆ ಮತದಾನ ನಡೆದಿದೆ. ಮತದಾನ ಮುಗಿದ ಬಳಿಕ ಮನ್ಸೂರ್ ಅಲಿ ಖಾನ್ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡಿದ್ದಾರೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಮನ್ಸೂರ್ ಅಲಿಖಾನ್ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಿ ಪಕ್ಷಕ್ಕೆ ಸೇರುವ ಪತ್ರ ಸಲ್ಲಿಸಿದ್ದಾರೆ. ಚುನಾವಣೆಯ ನಂತರ ಪಕ್ಷ ಸೇರುವ ಪತ್ರವನ್ನು ಸ್ವೀಕರಿಸಲಾಗುವುದು ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಸೇರುವುದಾಗಿ ಘೋಷಿಸಿರುವ ಮನ್ಸೂರ್ ಅಲಿಖಾನ್ ಅವರು ಪ್ರಧಾನಿ ಮೋದಿ ವಿರುದ್ಧ ವಿವಾದತ್ಮಕ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ವಿಷಸರ್ಪ ಇದ್ದ ಹಾಗೆ. ಅವರನ್ನು ತಿಹಾರ್ ಜೈಲಿನಲ್ಲಿಟ್ಟು ದೇಶದಲ್ಲಿ ಚುನಾವಣೆ ನಡೆಸಬೇಕು. ಅವರ ನೇತೃತ್ವದಲ್ಲಿ ಈ ಚುನಾವಣೆ ನ್ಯಾಯಯುತವಾಗಿ ನಡೆಯುವುದಿಲ್ಲ. ಪ್ರಧಾನಿ ಮೋದಿ ಅವರು ಮನಮೋಹನ್ ಸಿಂಗ್ ಅವರ ಕಾಲಿನ
ಧೂಳಿಗೆ ಸಮಾನರಲ್ಲ ಎಂದಿದ್ದಾರೆ. ಮೊದಲು ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೆ. ಮತ್ತೆ ಮಾತೃ ಪಕ್ಷ ಸೇರಲಿದ್ದೇನೆ. ಇಂಡಿಯನ್ ಡೆಮಾಕ್ರಟಿಕ್ ಟೈಗರ್ಸ್ ಪಾರ್ಟಿಯನ್ನು ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನಗೊಳಿಸಲಾಗುವುದು. ಮತ್ತು ಅದರ ಎಲ್ಲಾ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ಮನ್ಸೂರ್ ಅಲಿ ಖಾನ್‌ ತಿಳಿಸಿದ್ದಾರೆ.

Leave a Comment

Your email address will not be published. Required fields are marked *